ಶಿವಮೊಗ್ಗ: ಕೆಲ ದಿನಗಳ ಹಿಂದಷ್ಟೇ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನಗರದಲ್ಲಿ ದೂರು ಸ್ವೀಕಾರ ಕಾರ್ಯಕ್ರಮ ನಡೆಸಲಾಗಿತ್ತು. ಈ ಬೆನ್ನಲ್ಲೇ ಇಂದು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರಿಗೆ, ಡಿವೈಎಸ್ಪಿ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಕೃಷ್ಣಮೂರ್ತಿ ಎಂಬುವರೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕಿಬಿದ್ದಿರುವಂತ ಅಧಿಕಾರಿಯಾಗಿದ್ದಾರೆ. ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ.
ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ವಿರುದ್ಧ ಲೋಕಾಯುಕ್ತಕ್ಕೆ ಲಂಚದ ಹಣ ಕೇಳು ಸಂಬಂಧ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇಂದು ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ನೇತೃತ್ವದ ಅಧಿಕಾರಿಗಳು, ಸಿಬ್ಬಂದಿಗಳ ತಂಡ ದಾಳಿ ನಡೆಸಿ ಹಿಡಿದಿದೆ. ಇದೀಗ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ಕೃಷ್ಣಮೂರ್ತಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.