ತುಮಕೂರು: ದೂರು ಕೊಡಲು ಬಂದಿದ್ದಂತ ಮಹಿಳೆಯನ್ನು ಪರಿಚಯಿಸಿಕೊಂಡು ಆಕೆಯೊಂದಿಗೆ ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿದ್ದಂತ ಮಧುಗಿರಿ ಡಿವೈಎಸ್ಪಿಯನ್ನು ಅಮಾನತುಗೊಳಿಸಲಾಗಿತ್ತು. ಇದೀಗ ತಲೆಮರೆಸಿಕೊಂಡಿದ್ದಂತ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.
ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿಯಾಗಿದ್ದಂತ ರಾಮಚಂದ್ರಪ್ಪ ಸಮಸ್ಯೆ ಹೇಳಿಕೊಂಡು ಬಂದಿದ್ದಂತ ಮಹಿಳೆಯೊಬ್ಬರನ್ನು ಪುಸಲಾಯಿಸಿದ್ದರು. ಆ ಬಳಿಕ ಕಚೇರಿಯ ಶೌಚಾಲಯಕ್ಕೆ ಕರೆದೊಯ್ದು ರಾಸಲೀಲೆಯಲ್ಲಿ ತೊಡಗಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಚೇರಿಯಲ್ಲೇ ಮಹಿಳೆಯ ಜೊತೆಗೆ ರಾಸಲೀಲೆ ನಡೆಸಿದ್ದ ವೀಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮಾನತುಗೊಳಿಸಿ ಡಿಜಿ ಮತ್ತು ಐಜಿಪಿ ಆದೇಶ ಹೊರಡಿಸಿದ್ದರು.
ಇನ್ನೂ ಪ್ರಕರಣ ಬೆಳಕಿಗೆ ಬಂದ ನಂತ್ರ ಡಿವೈಎಸ್ಪಿ ರಾಮಚಂದ್ರಪ್ಪ ನಾಪತ್ತೆಯಾಗಿದ್ದರು. ಅವರನ್ನು ಈಗ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ ಸಂಸ್ಥಾಪನಾ ದಿನ ಆಚರಣೆ, ಪ್ರತಿಭಾ ಪುರಸ್ಕಾರ
BREAKING : ರಾಮನಗರದಲ್ಲಿ ಭೀಕರ ಕೊಲೆ : ‘ನ್ಯೂ ಇಯರ್’ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು!