ಬೆಂಗಳೂರು: ರಾಜ್ಯಾಧ್ಯಂತ ಇ-ಖಾತಾ ತಂತ್ರಾಂಶ ಜಾರಿಗೊಂಡಿದೆ. ಇ-ಖಾತಾ ಜಾರಿಗೊಂಡ ನಂತ್ರ ಕೆಲ ಸಮಸ್ಯೆಗಳು ಉಂಟಾಗಿರೋದು ಕಂಡು ಬಂದಿದೆ. ಇಂತಹ ಗೊಂದಲಕ್ಕೆ ವಾರದೊಳಗೆ ಪರಿಹಾರ ನೀಡಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬೆನ್ನಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಬಿಬಿಎಂಪಿ ವ್ಯಾಪ್ತಿಯ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾ ಗೆ ಸರ್ಕಾರ ಸಮಯ ನಿಗಧಿ ಮಾಡಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವುದಾಗಿ ಜನರನ್ನು ಸುಲಿಗೆ ಮಾಡಿರುವ ಘಟನೆ ಗಮನಕ್ಕೆ ಬಂದಿದೆ.
ಆದರೆ, ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿರಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ” ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆದರು.
ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ ಪರಿಹರಿಸಲಾಗುವುದು. ಇ – ಖಾತಾ ಪಡೆಯಲು ಯಾವುದೇ ಗಡುವು ಇಲ್ಲ. ನಾಗರಿಕರು ಊಹಾಪೋಹಗಳಿಗೆ ಕಿವಿಗೊಡದೆ, ಆತಂಕಗೊಳ್ಳದೆ ಇ-ಖಾತಾ ಮಾಡಿಸಿಕೊಳ್ಳಬಹುದು. ಮಧ್ಯವರ್ತಿಗಳ ಹಾವಳಿ, ನಕಲಿ ನೋಂದಣಿಗಳನ್ನು ತಡೆಯಲು, ಆಸ್ತಿ ಮಾಲೀಕತ್ವವನ್ನು ರಕ್ಷಿಸಲು ಇ-ಖಾತಾ ವ್ಯವಸ್ಥೆ… pic.twitter.com/UcCgPYqyT8
— DIPR Karnataka (@KarnatakaVarthe) October 8, 2024
ಸಿಲಿಕಾನ್ ಸಿಟಿ ಜನತೆಗೆ ಗುಡ್ ನ್ಯೂಸ್: ಬೆಂಗಳೂರಲ್ಲಿ ಮತ್ತೊಂದು ‘ಸಸ್ಯೋದ್ಯಾನ’ ನಿರ್ಮಾಣ