ಚಿತ್ರದುರ್ಗ : 2024-25ನೇ ಸಾಲಿನಿಂದ ಕೇಂದ್ರ ಪುರಸ್ಕøತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.
ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗುವುದು. ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಲ್ಲಿಯೂ ಫೆಸಿಲಿಟೇಷನ್ ಕೇಂದ್ರಗಳನ್ನು ತೆರೆದು ಇ-ದೃಢೀಕರಣ ಪಡೆಯಲಾಗುತ್ತಿದೆ.
ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ನಂತರ ಕಡ್ಡಾಯವಾಗಿ ಇ-ಕೆವೈಸಿ ಧೃಡೀಕರಣ ನೊಂದಣಿ ಮಾಡಿಸಲು ಕೋರಿದೆ. ಇಲ್ಲದವಾದಲ್ಲಿ ಕೇಂದ್ರ ಸರ್ಕಾರದಿಂದ ಬರುವ ಶೇ.60 ರಷ್ಟು ವಿದ್ಯಾರ್ಥಿವೇತನ ಮಂಜೂರಾಗುವುದಿಲ್ಲ ಎಂದು ಹೊಳಲ್ಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜಿಸಿ ಪ್ರತ್ಯೇಕ, ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಂಪುಟದ ನಿರ್ಧಾರ
ಇಲ್ಲಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting