ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿ ಪರಮೇಶ್ವರ್ ಗೆ ಇ-ಮೇಲ್ ಮುಖಾಂತರ ಬೆದರಿಕೆ ಸಂದೇಶ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರು ನಗರದಲ್ಲಿ ಜನನಿಬೀಡ ಪ್ರದೇಶಗಳಲ್ಲಿ ಹೈ ಅಲರ್ಟ್ ಇದ್ದು ಸೂಕ್ತ ಭದ್ರತೆ ಒದಗಿಸಲಾಗಿದೆ.

WATCH VIDEO: ದೇಶದ ಮೊದಲ ಅಂಡರ್ ವಾಟರ್ ಸುರಂಗದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ನಗರದ ಜನನಿಬೀಡ ಪ್ರದೇಶಗಳಲ್ಲಿ ಹೈ ಅಲರ್ಟ್ ಆಗಿದ್ದು ಮೆಜೆಸ್ಟಿಕ್, ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಸೂಕ್ತ ಭದ್ರತೆ ಒದಗಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಗಳ ತಪಾಸಣೆ ನಡೆಸಲಾಗುತ್ತಿದೆ.ಅಲ್ಲದೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅಧಿಕಾರಿಗಳು ಅಂತಹವರನ್ನು ವಿಚಾರಣೆಗೆ ಒಳಪಡಿಸುತ್ತಿದ್ದದ್ದು ಕಂಡುಬಂದಿದೆ.

ಇನ್ನೊಂದು ಕಡೆ ಕೆಎಸ್ಆರ್ ರೈಲ್ವೆ ನಿಲ್ದಾಣಗಳಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ರೈಲ್ವೆ ನಿಲ್ದಾಣದಲ್ಲಿ ಯಾವುದೇ ರೀತಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿಲ್ಲ. ಪೊಲೀಸರಕೋಡ ಮೆಟಲ್ ಡಿಟೆಕ್ಟರ್ ತಪಾಸಣೆ ನಡೆಸುತ್ತಿಲ್ಲ ಎಂದು ಹೇಳಲಾಗುತ್ತಿದೆ.

Share.
Exit mobile version