ಬೆಂಗಳೂರು: ಸ್ಲಂಗಳಲ್ಲಿ ವಾಸ ಮಾಡುತ್ತಿರುವ ಮಕ್ಕಳ ಶಿಕ್ಷಣಕ್ಕಾಗಿ ಸ್ಕಾಲರ್ಶಿಪ್ ರೂಪದಲ್ಲಿ ನನ್ನ ಚಾರಿಟೇಬಲ್ ಫೌಂಡೇಷನ್ ವತಿಯಿಂದ 5 ಸಾವಿರ ರೂಪಾಯಿ ಚೆಕ್ ವಿತರಣೆ ಮಾಡುತ್ತಿದ್ದೇನೆ ಎಂದು ಕೆಜಿಎಫ್ ಬಾಬು ಹೇಳಿದ್ದಾರೆ.
BIGG NEWS: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ನಾಲ್ಕು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು,ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಸ್ಲಂ ನಿವಾಸಿಗಳಿಗೆ ಕೋಟಿ ರೂ. ಹಣವನ್ನ ಮೀಸಲಿರಿಸಿದ್ದೇನೆ. 180 ಕೋಟಿ ರೂ. ವೆಚ್ಚದಲ್ಲಿ 3000 ಮನೆಗಳನ್ನು ನಿರ್ಮಿಸಿಕೊಡಲು ಮುಂದಾಗಿರುವ ನಮಗೆ ಹಲವಾರು ರೀತಿಯಲ್ಲಿ ತೊಡಕುಗಳುಂಟಾಗಿವೆ ಎಂದರು.
BIGG NEWS: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ನಾಲ್ಕು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಕ್ಷೇತ್ರದ 50 ಸಾವಿರ ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ. ಇದನ್ನು ಆರ್.ವಿ.ದೇವರಾಜ್ ಮತ್ತು ಅವರ ತಂಡದವರು ಪ್ರಶ್ನಿಸಿ, ನನ್ನ ಚೆಕ್ ವಿತರಣೆ ಕಾರ್ಯಕ್ಕೆ ಬೆದರಿಕೆ ಹಾಕುವ ಮೂಲಕ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.