ಚಿತ್ರದುರ್ಗ : ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ವಿರೋಧ ವಿಚಾರವಾಗಿ ಚಾಮುಂಡಿ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದೆ ಹಿಂದೂಗಳಿಗೆ ಸೇರಿದ್ದು ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೇಷ್ಟೆ ಮಾಡದಿದ್ದರೆ ಬಿಜೆಪಿ ಅವರಿಗೆ ನಿದ್ದೆ ಬರುವುದಿಲ್ಲ. ಚಾಮುಂಡೇಶ್ವರಿ ಪ್ರಾಧಿಕಾರ ಅಧಿಕೃತ ಹೌದು ಅಲ್ಲವೋ ಈ ಬಗ್ಗೆ ಕೋರ್ಟು ತೀರ್ಮಾನಿಸುತ್ತದೆ. ದಸರಾ ಏಳುಕೋಟೆ ಜನರಿಗೆ ಸೇರಿರುವಂತಹ ಹಬ್ಬ. ಬಿಎಸ್ ವೈ ಕಾಲದಲ್ಲಿ ಅಬ್ದುಲ್ ಕಲಾಂ ಅವರನ್ನು ಆಹ್ವಾನಿಸಿದ್ದರು. ಈ ಹಿಂದೆ ಕವಿ ನಿಸಾರ್ ಅಹಮದ್ ದಸರಾ ಉದ್ಘಾಟಿಸಿದರು.
ಆಗ ಬಿಜೆಪಿಗರು ಕುಂಕುಮ ಹಚ್ಚಿಕೊಂಡು ಬನ್ನಿ ಅಂತ ಅವರಿಗೆ ಹೇಳಿದ್ಧರಾ? ಅವರವರ ಧರ್ಮ ಅವರವರಿಗೆ ಶ್ರೇಷ್ಠ ಯಾವುದೇ ಧರ್ಮವನ್ನು ಯಾರು ದ್ವೇಷಿಸಬಾರದು ಅದಕ್ಕಾಗಿ ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಬಿಜೆಪಿ ಅವರಿಗೆ ಜನ ನೆಮ್ಮದಿಯಿಂದ ಇರುವುದು ಬೇಕಾಗಿಲ್ಲ ಬೆಂಕಿ ಹಚ್ಚಿ ಬೆಳೆಕಾಳು ಬೇಯಿಸಿಕೊಳ್ಳುವ ಕೆಲಸ ಮಾಡುತ್ತಾರೆ ಈಗಾಗಲೇ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.a