ಮ್ಯಾನ್ಮಾರ್ ನಲ್ಲಿ ಮಂಗಳವಾರ ತಡರಾತ್ರಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭಾರತೀಯ ಕಾಲಮಾನ ಬೆಳಗಿನ ಜಾವ 3.01ಕ್ಕೆ ಭೂಕಂಪ ಸಂಭವಿಸಿದೆ. ಈ ಬಗ್ಗ ಎನ್ಸಿಎಸ್ ‘ಎಕ್ಸ್’ ಪೋಸ್ಟ್ನಲ್ಲಿ ತಿಳಿಸಿದೆ.
ಇದಕ್ಕೂ ಮುನ್ನ ಸೆಪ್ಟೆಂಬರ್ 30 ರಂದು ಮ್ಯಾನ್ಮಾರ್ನಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ (ಎನ್ಸಿಎಸ್) ಹೇಳಿಕೆಯಲ್ಲಿ ತಿಳಿಸಿದೆ.
ಎನ್ಸಿಎಸ್ ಪ್ರಕಾರ, ಭೂಕಂಪನವು 15 ಕಿ.ಮೀ ಆಳದಲ್ಲಿ ಸಂಭವಿಸಿದೆ, ಇದು ಆಫ್ಟರ್ ಶಾಕ್ ಗಳು ಮತ್ತು ಮೇಲ್ಮೈ ಮಟ್ಟದ ಅಲುಗಾಡುವಿಕೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ.








