ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ತಿಳಿಸಿದೆ.
ಇಂದು ಬೆಳಗ್ಗೆ 11:33ಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿಯಿಂದ 5 ಕಿ.ಮೀ ಆಳದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಮಾಹಿತಿ ನೀಡಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.