ನವದೆಹಲಿ:ಇಂದು ಶುಕ್ರವಾರ ಮುಂಜಾನೆ ನೈಋತ್ಯ ಚೀನಾದಲ್ಲಿ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ
ಭಾರತೀಯ ಕಾಲಮಾನ ಬೆಳಿಗ್ಗೆ 6.29 ರ ಸುಮಾರಿಗೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ನೆರೆಯ ಮ್ಯಾನ್ಮಾರ್ ನಲ್ಲಿ ಭೂಕಂಪನದ ಅನುಭವವಾಗಿದೆ.
ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಯುನ್ನಾನ್ ನ ಬೌಶಾನ್ ನಿಂದ 32 ಕಿ.ಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಸಂಭವಿಸಿದೆ. ಯಾವುದೇ ಹಾನಿ ಅಥವಾ ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ