ನವದೆಹಲಿ: ದೆಹಲಿ ಎನ್ ಸಿಆರ್ ಸೇರಿದಂತೆ ಜಮ್ಮು-ಕಾಶ್ಮೀರದಲ್ಲೂ ಇಂದು ಭೂ ಕಂಪನ ಉಂಟಾಗಿದೆ. ಭೂಮಿ ಕಂಪಿಸಿದ್ದರಿಂದಾಗಿ ಜನರು ಬೆಚ್ಚಿಬಿದ್ದಿದ್ದಾರೆ.
ಜಮ್ಮು-ಕಾಶ್ಮೀರ, ದೆಹಲಿಯಲ್ಲಿ ಭೂಮಿ ಕಂಪಿಸಿದೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭೂ ಕಂಪನದ ಅನುಭವ ಉಂಟಾಗಿದೆ. ಹೀಗಾಗಿ ಮನೆಯಿಂದ ಹೊರಗೆ ಜನರು ಓಡಿ ಬಂದು ಕೆಲ ಕಾಲ ಆತಂಕದಲ್ಲಿ ಕಳೆದಿದ್ದಾರೆ ಎನ್ನಲಾಗಿದೆ.
ದೆಹಲಿ-ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್ಸಿಆರ್) ಮತ್ತು ಉತ್ತರ ಭಾರತದ ಇತರ ಕೆಲವು ಭಾಗಗಳಲ್ಲಿ ಗುರುವಾರ ಭೂಕಂಪನದ ಅನುಭವವಾಗಿದೆ.
ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನ ಭೂಕಂಪನ ಸಂಭವಿಸಿದೆ. ನೋಯ್ಡಾ, ಗಾಜಿಯಾಬಾದ್, ಫರಿದಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲೂ ಭೂಕಂಪನದ ಅನುಭವವಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Earthquake tremors felt in Delhi-NCR. Details awaited. pic.twitter.com/qTuaI5477B
— ANI (@ANI) January 11, 2024