ನವದೆಹಲಿ: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೇಹ್-ಲಡಾಖ್ ಮತ್ತು ಜಮ್ಮು& ಕಾಶ್ಮೀರದಲ್ಲಿ ಅಭಿವೃದ್ಧಿ ಯೋಜನೆಗಳು ಹಾಗೂ ಭದ್ರತೆಗೆ ಸಂಬಂಧಿಸಿದ ವಿಷಯಗಳ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು.
ಗೃಹ ಸಚಿವಾಲಯದ ಉತ್ತರ ಬ್ಲಾಕ್ ಕಚೇರಿಯಲ್ಲಿ ಸಚಿವಾಲಯ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಎರಡು ಪ್ರತ್ಯೇಕ ಸಭೆಗಳನ್ನು ನಡೆಸಲಾಯಿತು.
ಈ ವೇಳೆ ಮಾತನಾಡಿದ ಅಮಿತ್ ಶಾ,ಭಯೋತ್ಪಾದಕ-ಪ್ರತ್ಯೇಕತಾವಾದಿ ಅಭಿಯಾನಕ್ಕೆ ಸಹಾಯ ಮಾಡುವ ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಕಿತ್ತುಹಾಕುವ ಅಗತ್ಯವಿದೆ. ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸುವಂತೆ ಜೆ & ಕೆ ಆಡಳಿತ ಅಧಿಕಾರಿಗಳಿಗೆ ಸೂಚಿಸಿದರು.
ಜನಸಾಮಾನ್ಯರ ಯೋಗಕ್ಷೇಮವನ್ನು ಹಾಳುಮಾಡುವ ಭಯೋತ್ಪಾದಕ-ಪ್ರತ್ಯೇಕತಾವಾದಿ ಅಭಿಯಾನಕ್ಕೆ ಸಹಾಯ ಮಾಡುವ, ಪ್ರೋತ್ಸಾಹಿಸುವ ಮತ್ತು ಬೆಂಬಲಿಸುವ ಅಂಶಗಳನ್ನು ಒಳಗೊಂಡಿರುವ ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಕಿತ್ತುಹಾಕುವ ಅಗತ್ಯವಿದೆ ಎಂಬುದನ್ನು ಸಚಿವರು ಸಭೆಯಲ್ಲಿ ಒತ್ತಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಇಂಟೆಲಿಜೆನ್ಸ್ ಬ್ಯೂರೋ ನಿರ್ದೇಶಕ ತಪನ್ ದೇಕಾ, ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕ ದಿನಕರ್ ಗುಪ್ತಾ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ ಮಹಾನಿರ್ದೇಶಕ ಸುಜೋಯ್ ಲಾಲ್ ಥಾಸೆನ್, ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಮೆಹ್ತಾ ಮತ್ತು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಉಪಸ್ಥಿತರಿದ್ದರು.
ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಸಿದ್ರಾ ಬಳಿ ಕಾಶ್ಮೀರ ಕಣಿವೆಗೆ ತೆರಳುತ್ತಿದ್ದ ಟ್ರಕ್ ಅನ್ನು ಭದ್ರತಾ ಪಡೆಗಳು ತಡೆದಿದ್ದರು. ಈ ವೇಳೆ ಭಯೋತ್ಪಾಕರು ಮತ್ತು ಸೇನೆ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಎನ್ಕೌಂಟರ್ ನಲ್ಲಿ ನಾಲ್ವರು ಭಯೋತ್ಪಾದಕರನ್ನು ಸೇನೆ ಸೆದೆಬಡಿದದಿದೆ.
ಭಯೋತ್ಪಾಕರಿಂದ ಏಳು ಎಕೆ 47 ರೈಫಲ್ಗಳು, ಒಂದು ಎಂ4 ಕಾರ್ಬೈನ್ ಮತ್ತು ಮೂರು ಪಿಸ್ತೂಲ್ಗಳನ್ನು ಒಳಗೊಂಡಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಜೆ & ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
BIGG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ‘ಖಾಕಿ’ ಫುಲ್ ಅಲರ್ಟ್ : ‘CCTV’ ಜೊತೆ ‘ಡ್ರೋನ್’ ಹದ್ದಿನ ಕಣ್ಣು
BREAKING NEWS : ರಾಜ್ಯದಲ್ಲಿ ಇಂದು 39 ಜನರಿಗೆ ಕೊರೊನಾ ಸೋಂಕು ಧೃಡ : ಸಕ್ರಿಯ ಪ್ರಕರಣಗಳ ಸಂಖ್ಯೆ 1,275 |COVID 19
BREAKING NEWS : ಈಜು ಹೊಂಡದಲ್ಲಿ ಮುಳುಗಿ ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿ ಸಾವು