ನವದೆಹಲಿ: ಮನೆ ಖರೀದಿದಾರರೊಂದಿಗೆ ವಂಚನೆ ಆರೋಪದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಿಯಾಲ್ಟಿ ಕಂಪನಿ ಜೇಪೀ ಇನ್ಫ್ರಾಟೆಕ್ ನ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಗೌರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ಉದ್ಯಮಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅವರ ವಿರುದ್ಧದ ತನಿಖೆಯು ಮನೆ ಖರೀದಿದಾರರಿಗೆ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ








