ನವದೆಹಲಿ: ಇಡಿ ಅಧಿಕಾರಿಗಳಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಅಕ್ರಮ ಹಣ ವರ್ಗಾವಣ ಪ್ರಕರಣದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ಬೆನ್ನಲ್ಲೇ ಇದೀಗ ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ಸೇರಿದಂತೆ 100 ಕೋಟಿ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿರೋದಾಗಿ ತಿಳಿದು ಬಂದಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಸಂಕಷ್ಟ ಎದುರಾಗಿದೆ. ಇದೀಗ ಇಡಿ ಅಧಿಕಾರಿಗಳು ಅವರಿಗೆ ಸೇರಿದಂತ 100 ಕೋಟಿ ಆಸ್ತಿಯನ್ನು ಜಪ್ತಿ ಮಾಡಿದೆ.
Video: ದೆಹಲಿಯಲ್ಲಿ ಸಂಸದರಿಂದ ʻತ್ರಿವರ್ಣ ಯಾತ್ರೆʼ: ಸ್ಕೂಟಿ ಓಡಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ
ಅಂದಹಾಗೇ ಕೆಲ ದಿನಗಳ ಹಿಂದೆ ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಸತತವಾಗಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆ ನಡೆಸಿತ್ತು. ಇದೇ ಕಾರಣದಿಂದಾಗಿ ಇಡಿ ಕಿರುಕುಳ ನೀಡುತ್ತಿದೆ ಎಂಬುದಾಗಿ ದೇಶಾದ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಕೂಡ ನಡೆಸಲಾಗಿತ್ತು.