ಬೆಂಗಳೂರು : ನ್ಯಾಷನಲ್ ಹೆರಾಲ್ಡ್ (National Herald Case) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಇಡಿ ವಿಚಾರಣೆ ವಿರೋಧಿಸಿ ದೆಹಲಿ ಮಾತ್ರವಲ್ಲ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಮಾಡಲು ಕಾಂಗ್ರೆಸ್ ಮುಂದಾಗಿದೆ.
ಹಂದಿಗಳಲ್ಲಿ ‘ಆಫ್ರಿಕನ್ ಹಂದಿ ಜ್ವರ’ ಪತ್ತೆ : ಲಕ್ನೋದಲ್ಲಿ ಹಂದಿಮಾಂಸ ಮಾರಾಟ ನಿಷೇಧ | Lucknow bans sale of pork
ಕೇಂದ್ರ ಸರ್ಕಾರ ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಅರೋಪಡಡಿ ಸಿಲಿಕಾನ್ ಸಿಟಿಯ ಫ್ರೀಡಂ ಪಾರ್ಕ್ ಪಾರ್ಕ್ನನಿಂದ ರಾಜಭವನಕ್ಕೆ ತೆರಳಿ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಸಿಲಿಕಾನ್ ಸಿಟಿ ಟ್ರಾಫಿಕ್ ಜಾಮ್ ಸಂಭವಿಸೋದು ಬಹುತೇಕ ಖಚಿತವಾಗಿದೆ ಈಗಾಗಲೇ ಫ್ರೀಡಂ ಪಾರ್ಕ್ ಸುತ್ತಮುತ್ತ ಪೊಲೀಸರ ನಿಯೋಜನೆ 30 ಇನ್ಪೆಕ್ಟರ್ ನೇತೃತ್ವದಲ್ಲಿ90 ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ. ವಿಧಾನಸೌಧ , ಮಹಾರಾಣಿ ಕಾಲೇಜು ಸುತ್ತಮುತ್ತ ಟ್ರಾಫಿಕ್ ಜಾಮ್ ಸಂಭವಿಸಲಿದೆ. ಇಂದು 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.
ಹಂದಿಗಳಲ್ಲಿ ‘ಆಫ್ರಿಕನ್ ಹಂದಿ ಜ್ವರ’ ಪತ್ತೆ : ಲಕ್ನೋದಲ್ಲಿ ಹಂದಿಮಾಂಸ ಮಾರಾಟ ನಿಷೇಧ | Lucknow bans sale of pork
ಏನಿದು ನ್ಯಾಷನಲ್ ಹೆರಾಲ್ಡ್ ಕೇಸ್?: 2012ರಲ್ಲಿ ಬಿಜೆಪಿ ನಾಯಕ ಮತ್ತು ವಕೀಲರಾಗಿರುವ ಸುಬ್ರಮಣ್ಯನ್ ಸ್ವಾಮಿ ಅವರು ಯಂಗ್ ಇಂಡಿಯನ್ ಲಿಮಿಟೆಡ್ (ವೈಐಎಲ್) ನಿಂದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಕೆಲವು ಕಾಂಗ್ರೆಸ್ ನಾಯಕರು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ವಿಚಾರಣಾ ನ್ಯಾಯಾಲಯದ ಮುಂದೆ ದೂರು ಸಲ್ಲಿಸಿದ್ದರು. ವೈಐಎಲ್ ನ್ಯಾಷನಲ್ ಹೆರಾಲ್ಡ್ನ ಆಸ್ತಿಯನ್ನು ದುರುದ್ದೇಶಪೂರಿತ ರೀತಿಯಲ್ಲಿ ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದರು.
ನ್ಯಾಷನಲ್ ಹೆರಾಲ್ಡ್ 1938ರಲ್ಲಿ ಜವಾಹರಲಾಲ್ ನೆಹರು ಇತರ ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಸ್ಥಾಪಿಸಿದ ಪತ್ರಿಕೆಯಾಗಿದೆ. 2014ರಲ್ಲಿ ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆಯೇ ಎಂದು ತನಿಖೆ ಆರಂಭಿಸಿತ್ತು. 2015 ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ತನ್ನ ತನಿಖೆಯನ್ನು ಪುನರಾರಂಭಿಸಿತ್ತು.