ಬೆಂಗಳೂರು: ಮುಡಾ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದೆ. ಈ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಈ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಇಡಿಯಿಂದ ಸಚಿವ ಬೈರತಿ ಸುರೇಶ್ ಗೆ ನೋಟಿಸ್ ಜಾರಿಗೊಳಿಸಿ ಶಾಕ್ ನೀಡಲಾಗಿದೆ.
ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾ ಹಗರಣದ ಸಂಬಂಧ ವಿಚಾರಣೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ನೋಟಿಸ ನೀಡಲಾಗಿತ್ತು. ಈ ಬೆನ್ನಲ್ಲೇ ಸಚಿವ ಬೈರತಿ ಸುರೇಶ್ ಅವರಿಗೂ ಇಡಿ ನೋಟಿಸ್ ನೀಡಿದೆ.
ಇಡಿ ಸಚಿವ ಬೈರತಿ ಸುರೇಶ್ ಅವರಿಗೆ ನೀಡಿದಂತ ನೋಟಿಸ್ ನಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಹೀಗಾಗಿ ಸಚಿವ ಬೈರತಿ ಸುರೇಶ್ ಅವರಿಗೂ ಮುಡಾ ಕೇಸಲ್ಲಿ ಸಂಕಷ್ಟ ಶುರುವಾದಂತೆ ಆಗಿದೆ.
ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ನಿಯಮ ಬಿಡುಗಡೆ, ಪೋರ್ಟಲ್ ಆರಂಭ | Uniform Civil Code
SHOCKING : ಹಾಸ್ಟೆಲ್ ನಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದು 8 ನೇ ತರಗತಿ ವಿದ್ಯಾರ್ಥಿ ಸಾವು.!