ಬೆಂಗಳೂುರ: ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ( DK Shivakumar and DK Suresh ) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದರು. ಈ ಬಳಿಕ, ಮತ್ತೆ ಇಂದು ಅಕ್ಟೋಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ.
ತಮ್ಮ ಕಚೇರಿ ಮುಂದೆ ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (Enforcement Directorate – ED ) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ ಕೆ ಸುರೇಶ್ ಅವರಿಗೆ ಮತ್ತೆ ಸಮನ್ಸ್ ಜಾರಿ ಮಾಡಿದೆ.
ಶಿವಮೊಗ್ಗ: ಅ.8ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಈ ಮೊದಲು ದಿನಾಂಕ 23-09-2022 ರಂದು ಇವರಿಬ್ಬರಿಗೂ ಅಕ್ಟೋಬರ್ 7 ರಂದು ವಿಚಾರಣೆಗೆ ಬರುವಂತೆ ಇ ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಶಿವಕುಮಾರ್ ಹಾಗೂ ಸುರೇಶ್ ಅವರು ಪತ್ರ ಬರೆದು ಕೋರಿದ್ದರು.
ಆದರೆ ಅದಕ್ಕೆ ನಿರಾಕರಿಸಿರುವ ಇಡಿ 7-10-2022 ರಂದು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ದಿನಾಂಕ 05-10-2022 ರಂದು ಮತ್ತೊಂದು ನೋಟಿಸ್ ಜಾರಿ ಮಾಡಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಡಿ.ಕೆ ಶಿವಕುಮಾರ್, ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಇದು ‘ಸಿನಿಮಾ ಕತೆ’ಯಲ್ಲ, ‘ರಿಯಲ್ ಪೊಲೀಸ್’ ಕತೆ: ಏನು ಅಂತ ಈ ಸುದ್ದಿ ಓದಿ.! | Karnataka Police