ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನ.7 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇಂದು ಬೆಳಗ್ಗೆ ಡಿಕೆಶಿಗೆ ಇಡಿ ನೋಟಿಸ್ ನೀಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ( Money laundering case ) ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ( Karnataka Pradesh Congress Committee president DK Shivakumar ) ಈಗ ಮತ್ತೆ ಬಂಧನದ ಭೀತಿ ಶುರುವಾಗಿದೆ. ಹೀಗಾಗಿಯೇ ರಕ್ಷಣೆ ಕೋರಿ ಅವರು ದೆಹಲಿ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಇಂದು ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದಂತ ದೆಹಲಿ ಹೈಕೋರ್ಟ್ ನ್ಯಾಯಪೀಠವು ಇಡಿಗೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ ವಿಚಾರಣೆಯನ್ನು ನವೆಂಬರ್ 23ಕ್ಕೆ ಮುಂದೂಡಿಕೆ ಮಾಡಿದೆ.
ಅಂದಹಾಗೇ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂದ ಡಿಕೆ ಶಿವಕುಮಾರ್ ವಿರುದ್ಧ ಇಡಿ ಪ್ರಕರಣ ದಾಖಲಿಸಿತ್ತು. ಈ ಪ್ರಕರಣದಲ್ಲಿ ಬಂಧನದ ಭೀತಿಯನ್ನು ಅವರು ಎದುರಿಸುತ್ತಿದ್ದರು. ಹೀಗಾಗಿಯೇ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನ.7 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇಂದು ಬೆಳಗ್ಗೆ ಡಿಕೆಶಿಗೆ ಇಡಿ ನೋಟಿಸ್ ನೀಡಿದೆ.