ಮೈಸೂರು: ಇಡಿ ಅಧಿಕಾರಿಗಳು ಇಂದು ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಕೆಲವು ದಾಖಲೆಗಳನ್ನು ಕೇಳಿದ್ದಾರೆ. ಆ ಎಲ್ಲಾ ಮಾಹಿತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ನೀಡಲಾಗುತ್ತದೆ ಎಂಬುದಾಗಿ ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಡಾ ಕಚೇರಿಯ ಮೇಲೆ 20 ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳು ಕೆಲವು ಮಾಹಿತಿ ಕೇಳಿದ್ದಾರೆ. ಆ ಎಲ್ಲಾ ಮಾಹಿತಿಯನ್ನು ಒದಗಿಸುತ್ತೇವೆ. 2 ದಿನಗಳ ಕಾಲ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಅದಕ್ಕೆ ನಾವು ಸಹಕರಿಸಲಿದ್ದೇವೆ ಎಂದರು.
ಮತ್ತೊಂದೆಡೆ ಇದೊಂದು ರಾಜಕೀಯ ಪ್ರೇರಿತವಾದಂತ ದಾಳಿಯಾಗಿದೆ. ವಿರೋಧ ಪಕ್ಷಗಳ ಮೇಲೆ ಪ್ರಯೋಗ ಹೊಸದೇನಲ್ಲ. ಸಿಎಂ ಸಿದ್ಧರಾಮಯ್ಯ ಮುಡಾ ಆರೋಪದಿಂದ ಮುಕ್ತರಾಗುತ್ತರೆ ಎಂಬುದಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಗುಡುಗಿದ್ದಾರೆ.
‘ಈಶಾ ಫೌಂಡೇಶನ್’ ವಿರುದ್ಧದ ಪ್ರಕರಣ ವಜಾಗೊಳಿಸಿದ ‘ಸುಪ್ರೀಂ ಕೋರ್ಟ್’ | Isha Foundation
BREAKING : ಕಲಬುರ್ಗಿ ಜೈಲಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ಆರೋಪ ಪ್ರಕರಣ : ‘CCB’ ತನಿಖೆಗೆ ವಹಿಸಿ ಕಮಿಷನರ್ ಆದೇಶ