ಬೆಂಗಳೂರು: ಮೈಸೂರಿನ ಮುಡಾದಲ್ಲಿ ನಡೆದಿರುವಂತ ಅಕ್ರಮ ಸಂಬಂಧ ಈಗಾಗಲೇ ಇಡಿ ಅಧಿಕಾರಿಗಳಿಂದ ಕಚೇರಿ ಮೇಲೆ ದಾಳಿ ನಡೆಸಲಾಗಿತ್ತು. ಈ ನಂತ್ರ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಮೈಸೂರಿನ ಮುಡಾ ಕಚೇರಿಯ ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲದಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇಡಿ ಅಧಿಕಾರಿಗಳಿಂದ ಮುಡಾ ಅಧಿಕಾರಿ ಶ್ರುತಿ ಹಾಗೂ ತಹಶೀಲ್ದಾರ್ ರಾಜಶೇಖರ್ ಎಂಬುವರಿಗೆ ನೋಟಿಸ್ ನೀಡಲಾಗಿದೆ.
ಇನ್ನೂ ಎಫ್ ಡಿಸಿ ರವಿ ಹಾಗೂ ಪ್ರಶಾಂತ್ ಎಂಬುವರಿಗೂ ಇಡಿ ನೋಟಿಸ್ ನೀಡಿದೆ. ಇಡಿ ನೀಡಿರುವಂತ ನೋಟಿಸ್ ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಮೂಲಕ ಮುಡಾ ಸೈಟ್ ಹಂಚಿಕೆ ಅಕ್ರಮ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಂತೆ ಆಗಿದೆ.
BREAKING: ಮಂಡ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಹಾಡು ಹಗಲೇ ಮನೆಗೆ ನುಗ್ಗಿ ಒಂಟಿ ಮಹಿಳೆ ಹೆದರಿಸಿ ದರೋಡೆ
ರಾಜ್ಯದಲ್ಲೊಬ್ಬ ಅಪರೂಪದ ‘ಡೊಳ್ಳು ಕಲಾವಿದ’: ಇವರ ಸಾಧನೆ ಕೇಳಿದ್ರೆ ‘ನೀವೇ ಶಾಕ್’ ಆಗ್ತೀರಿ