ಮೈಸೂರು: ಮುಡಾ ಹಗರಣದ ಬಳಿಕ, ಇಡಿ ಅಧಿಕಾರಿಗಳಿಗೆ ದೂರುದಾರ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಈ ದೂರು ಆಧರಿಸಿ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿದ್ದರು. ಈ ಬೆನ್ನಲ್ಲೇ ಇಂದು ಮೈಸೂರಿನ ಮುಡಾ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಕಚೇರಿಯ ಮೇಲೆ ಹಗರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಹುಡುಕಾಟ ನಡೆಸುತ್ತಿದ್ದಾರೆ.
ಅಂದಹಾಗೇ ಮುಡಾ ಹಗರಣ ಸಂಬಂಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರಿನ ನಂತ್ರ ಕೇಸ್ ಕೂಡ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಮುಡಾ ಕಚೇರಿಯ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
BREAKING : ಕಲಬುರ್ಗಿ ಜೈಲಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ಆರೋಪ ಪ್ರಕರಣ : ‘CCB’ ತನಿಖೆಗೆ ವಹಿಸಿ ಕಮಿಷನರ್ ಆದೇಶ