ಬೆಂಗಳೂರು: ಮುಡಾ ಹಗರಣ ಸಂಬಂಧ ಮುಡಾ ಮಾಜಿ ಆಯುಕ್ತ ನಟೇಶ್, ದಿನೇಶ್ ಕುಮಾರ್ ಹಾಗೂ ಬಿಲ್ಡರ್ ಮಂಜುನಾಥ್ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳನ್ನು ಪತ್ತೆ ಹಚ್ಚಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ಬೆಂಗಳೂರಿನ ಮಲ್ಲೇಶ್ವರಂ 10ನೇ ಕ್ರಾಸ್ ನಲ್ಲಿರುವಂತ ಮುಡಾ ಮಾಜಿ ಆಯುಕ್ತ ನಟೇಶ್ ನಿವಾಸ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐವರು ಇಡಿ ಅಧಿಕಾರಿಗಳ ತಂಡವು ದಾಳಿ ನಡೆಸಿದ್ದು, ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಇದಲ್ಲದೇ ಬಿಲ್ಡರ್ ಮಂಜುನಾಥ್ ಅವರ ಬೆಂಗಳೂರಿನ ಜೆಪಿ ನಗರದಲ್ಲಿರುವಂತ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಹಗರಣ ಸಂಬಂಧ ಇಬ್ಬರ ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ಬೆಂಗಳೂರಿನ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ನಿವಾಸದ ಮೇಲೂ ಇಡಿ ದಾಳಿ ನಡೆಸಿದೆ. ಬೆಂಗಳೂರಿನ ಹೆಬ್ಬಾಳದ ಬಾಣಸವಾಡಿ ರಸ್ತೆಯ ದೀಪಿಕಾ ರಾಯಲ್ ಅಪಾರ್ಮೆಂಟ್ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ. ಇಡಿ ದಾಳಿಯ ವಿಷಯ ತಿಳಿದು, ವಾಕಿಂಗ್ ಹೋಗಿದ್ದಂತ ದಿನೇಶ್ ಕುಮಾರ್ ಅಲ್ಲಿಂದಲೇ ನಾಪತ್ತೆಯಾಗಿರೋದಾಗಿ ತಿಳಿದು ತಿಳಿದು ಬಂದಿದೆ.
ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಬೆಳಗಾವಿಯಲ್ಲಿ ಗೋಮಾಳ ಜಾಗಕ್ಕಾಗಿ ದಲಿತರ ಗುಡಿಸಲುಗಳಿಗೆ ಬೆಂಕಿ!
BREAKING : ‘ಮುಡಾ’ ಹಗರಣ : ಬಿಲ್ಡರ್ ಮಂಜುನಾಥ್ ವಿರುದ್ಧ ‘ED’ ಗೆ ಮತ್ತೊಂದು ದೂರು ಸಲ್ಲಿಕೆ!