ನವದೆಹಲಿ: ಮನಿ ಲಾಂಡರಿಂಗ್ ತನಿಖೆಯಲ್ಲಿ ಭಾಗವಹಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ನೀಡಿದ ಹೊಸ ಸಮನ್ಸ್ಗೆ ಪ್ರತಿಕ್ರಿಯೆಯಾಗಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಜನವರಿ 29 ರಂದು ದೆಹಲಿಗೆ ದಿಢೀರ್ ಪ್ರವಾಸ ಕೈಕೊಂಡಿದ್ದಾರೆ.
ಈ ನಡುವೆ ಜನವರಿ 29 ಅಥವಾ ಜನವರಿ 31 ರಂದು ವಿಚಾರಣೆಗೆ ಹಾಜರಾಗುವಂತೆ ಸೊರೆನ್ ಅವರನ್ನು ಇಡಿ ಕೇಳಿದೆ. ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತಂಡ ಸೋಮವಾರ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ನಿವಾಸಕ್ಕೆ ಭೇಟಿ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಜಾರ್ಖಂಡ್ನಲ್ಲಿ ಮಾಫಿಯಾದಿಂದ ಭೂಮಿಯ ಮಾಲೀಕತ್ವವನ್ನು ಅಕ್ರಮವಾಗಿ ಬದಲಾಯಿಸುವ ಬೃಹತ್ ದಂಧೆಗೆ ಸಂಬಂಧಿಸಿದೆ ಎಂದು ಸಂಸ್ಥೆ ತಿಳಿಸಿದೆ.