ಕೋಲಾರ: ಶಾಸಕರ ಶಿಫಾರಸು ಪತ್ರ ನೀಡಿದ ಕೋಚಿಮುಲ್ ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಅಂತ ತಿಳಿದು ಬಂದಿದೆ.
ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಮನೆಯ ಮೇಲೆ ದಾಳಿ ಮಾಡಿದಾಗ 30ಕ್ಕೂ ಹೆಚ್ಚು ಸಚಿವರು, ಶಾಸಕರ ಶಿಫಾರಸು ಪತ್ರ ಪತ್ತೆಯಾಗಿದೆ ಎಂದು ಇಡಿ ಅಧಿಕೃತವಾಗಿ ತಿಳಿಸಿದ್ದು, ನೇಮಕಾತಿಗೆ ದೊಡ್ಡ ಪ್ರಮಾಣದಲ್ಲಿ ಹಣ ಪಡೆದುಕೊಂಡಿರುವುದು ಕೂಡ ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ.
ಮೊದಲ ಹಂತದಲ್ಲಿ 10 ಮಂದಿಯನ್ನು ಇಡಿ ವಿಚಾರಣೆ ನಡೆಸಲಿದ್ದು ಶಿಫಾರಸು ಪತ್ರ ಕೊಟ್ಟ ಎಲ್ಲರನ್ನು ವಿಚಾರಣೆ ನಡೆಸಲಿದೆ ಅಂತ ತಿಳಿದು ಬಂದಿದೆ.. ಪ್ರತಿಯೊಬ್ಬ ಅಭ್ಯರ್ಥಿಗಳ ಬಳಿ 20 ರಿಂದ 30 ಲಕ್ಷ ರೂ. ಹಣವನ್ನು ಪಡೆಯಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆಯ್ಕೆಯಾದ ಎಲ್ಲರಿಗೂ ಇಡಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ ಅಂತೆ.