Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮಾ.27 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

23/03/2026 5:08 PM

ಬೆಂಗಳೂರಿಗೆ ಬರಲು ಇಷ್ಟವಿಲ್ಲದೆ 34 ಲಕ್ಷ ಸಂಬಳದ ಆಫರ್ ತಿರಸ್ಕರಿಸಿದ ವ್ಯಕ್ತಿ: ನೆಟ್ಟಿಗರು ಹೇಳಿದ್ದೇನು ಓದಿ!

23/03/2026 4:45 PM

ಭಾರತವು 5.3 ಮಿಲಿಯನ್ ಮೆಟ್ರಿಕ್ ಟನ್ ಇಂಧನ ದಾಸ್ತಾನು ಹೊಂದಿದೆ; ಲೋಕಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ | PM Modi

23/03/2026 4:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ED ಸಮನ್ಸ್ ಕಿರುಕುಳ ಖಂಡನೀಯ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ED ಸಮನ್ಸ್ ಕಿರುಕುಳ ಖಂಡನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0906/12/2025 2:29 PM

ಬೆಂಗಳೂರು: “ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.

ಇಡಿ ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ. ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದರು.

ಡಿ.19 ರ ಒಳಗೆ ಪೊಲೀಸರಿಗೆ ಮಾಹಿತಿ ನೀಡಬೇಕು

“ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್ ಗೆ ಇಡಿ ಸಮನ್ಸ್ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ದೆಹಲಿ ಪೊಲೀಸರು ಡಿಸೆಂಬರ್ 19 ನೇ ತಾರೀಕಿನ ಒಳಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ” ಎಂದು ಹೇಳಿದರು.

“ನಾವು ತೆರಿಗೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ. ಕಿರುಕುಳ ನೀಡಲು ಪಿಎಂಎಲ್ ಎ ಪ್ರಕರಣ ಕೂಡ ದಾಖಲಿಸಿದ್ದರು. ಆನಂತರ ಏನಾಯಿತು? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಜತೆಗೆ ಗೊಂದಲ ಮೂಡಿಸುವುದು ಇದರ ಉದ್ದೇಶ” ಎಂದರು.

“ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್, ಯಂಗ್ ಇಂಡಿಯಾ ಇವು ನಮ್ಮ ಕಾಂಗ್ರೆಸ್ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟ ಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕ ಜನರು ಸಹಾಯ ಮಾಡಿದ್ದಾರೆ” ಎಂದರು.

“ಶುಕ್ರವಾರ ನನಗೆ ಹಾಗೂ ಸುರೇಶ್ ಅವರಿಗೆ ನೋಟಿಸ್ ಬಂದಿದೆ. ಆತ ಸಂಸದನಾದ ಸಮಯದಲ್ಲಿ ಒಂದಷ್ಟು ಹಣ ದೇಣಿಗೆ ನೀಡಿದ್ದ. ನೋಟಿಸ್ ಅನ್ನು ವಿವರವಾಗಿ ತಿಳಿದುಕೊಂಡು ಕಾನೂನಾತ್ಮಕವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ” ಎಂದರು.

Share. Facebook Twitter LinkedIn WhatsApp Email

Related Posts

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮಾ.27 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

23/03/2026 5:08 PM1 Min Read

ಬೆಂಗಳೂರಿಗೆ ಬರಲು ಇಷ್ಟವಿಲ್ಲದೆ 34 ಲಕ್ಷ ಸಂಬಳದ ಆಫರ್ ತಿರಸ್ಕರಿಸಿದ ವ್ಯಕ್ತಿ: ನೆಟ್ಟಿಗರು ಹೇಳಿದ್ದೇನು ಓದಿ!

23/03/2026 4:45 PM2 Mins Read

BREAKING : ಬೆಂಗಳೂರಲ್ಲಿ ಕಾರು ಡಿಫ಼್ಟ್ರಿಂಗ್ ಪ್ರಕರಣ : ರಿಕ್ಕಿ ರೈಗೆ ಕೋರ್ಟ್ ನಿಂದ ಜಾಮೀನು ಮಂಜೂರು!

23/03/2026 4:37 PM1 Min Read
Recent News

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮಾ.27 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

23/03/2026 5:08 PM

ಬೆಂಗಳೂರಿಗೆ ಬರಲು ಇಷ್ಟವಿಲ್ಲದೆ 34 ಲಕ್ಷ ಸಂಬಳದ ಆಫರ್ ತಿರಸ್ಕರಿಸಿದ ವ್ಯಕ್ತಿ: ನೆಟ್ಟಿಗರು ಹೇಳಿದ್ದೇನು ಓದಿ!

23/03/2026 4:45 PM

ಭಾರತವು 5.3 ಮಿಲಿಯನ್ ಮೆಟ್ರಿಕ್ ಟನ್ ಇಂಧನ ದಾಸ್ತಾನು ಹೊಂದಿದೆ; ಲೋಕಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ | PM Modi

23/03/2026 4:41 PM

BREAKING : ಬೆಂಗಳೂರಲ್ಲಿ ಕಾರು ಡಿಫ಼್ಟ್ರಿಂಗ್ ಪ್ರಕರಣ : ರಿಕ್ಕಿ ರೈಗೆ ಕೋರ್ಟ್ ನಿಂದ ಜಾಮೀನು ಮಂಜೂರು!

23/03/2026 4:37 PM
State News
KARNATAKA

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮಾ.27 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

By kannadanewsnow0923/03/2026 5:08 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಮಾರ್ಚ್ 27 ರಂದು…

ಬೆಂಗಳೂರಿಗೆ ಬರಲು ಇಷ್ಟವಿಲ್ಲದೆ 34 ಲಕ್ಷ ಸಂಬಳದ ಆಫರ್ ತಿರಸ್ಕರಿಸಿದ ವ್ಯಕ್ತಿ: ನೆಟ್ಟಿಗರು ಹೇಳಿದ್ದೇನು ಓದಿ!

23/03/2026 4:45 PM

BREAKING : ಬೆಂಗಳೂರಲ್ಲಿ ಕಾರು ಡಿಫ಼್ಟ್ರಿಂಗ್ ಪ್ರಕರಣ : ರಿಕ್ಕಿ ರೈಗೆ ಕೋರ್ಟ್ ನಿಂದ ಜಾಮೀನು ಮಂಜೂರು!

23/03/2026 4:37 PM

ಬೆಂಗಳೂರಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣ: ರಿಕ್ಕಿ ರೈಗೆ ಕೋರ್ಟ್ ಜಾಮೀನು ಮಂಜೂರು

23/03/2026 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.