ಬಿಗ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಈದ್ ಮಿಲಾದ್’ ಆಚರಣೆಗೆ ಮಾರ್ಗಸೂಚಿ ಪ್ರಕಟ : ಈ ನಿಮಯಗಳ ಪಾಲನೆ ಕಡ್ಡಾಯ – Kannada News Now


State

ಬಿಗ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಈದ್ ಮಿಲಾದ್’ ಆಚರಣೆಗೆ ಮಾರ್ಗಸೂಚಿ ಪ್ರಕಟ : ಈ ನಿಮಯಗಳ ಪಾಲನೆ ಕಡ್ಡಾಯ

ಬೆಂಗಳೂರು : ಈಗಾಗಲೇ ದಸರಾ ಹಾಗೂ ದೀಪಾವಳಿಯನ್ನು ಸರಳವಾಗಿ ಆಚರಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಿದ್ದಂತ ರಾಜ್ಯ ಸರ್ಕಾರ, ಇದೀಗ ಮುಸ್ಲೀಂ ಸಮುದಾಯದವರ ಪ್ರಮುಖ ಹಬ್ಬಗಳಲ್ಲಿ ಒಂದಾದಂತ ಈದ್ ಮಿಲಾದ್ ಗೆ ಮಾರ್ಗಸೂಚಿ ರಿಲೀಸ್ ಮಾಡಿದೆ. ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು, ಈದ್ ಮಿಲಾದ್ ಆಚರಿಸುವಂತೆ ಸೂಚಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಈದ್ ಮಿಲಾದ್ ಹಬ್ಬದ  ವೇಳೆ ಸಾಮೂಹಿಕ ಮೆರವಣಿಗೆಗೆ ನಿಷೇಧ ಹೇರಲಾಗಿದೆ. ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ನಿಷೇಧವಿಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಮಸೀದಿಗಳಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂಬುದಾಗಿ ಮಾರ್ಗಸೂಚಿಯಲ್ಲಿ ತಿಳಿಸಿದೆ. ಒಂದು ವೇಳೆ ಈ ನಿಮಯಗಳನ್ನು ಮೀರಿದ್ರೆ.. ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದೆ.
error: Content is protected !!