ಬೆಂಗಳೂರು: ಶಾಲೆಯಲ್ಲಿ ಗಣೇಶಮೂರ್ತಿಯನ್ನ ಕೂರಿಸುವ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾತನಾಡಿ ʻಗಣೇಶ ಕೂರಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿಲ್ಲ, ನಮಾಜ್ಗೆ ಅವಕಾಶ ಕೊಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ
ಮಧ್ಯಪ್ರದೇಶದ RTO ಅಧಿಕಾರಿಯ ನಿವಾಸದ ಮೇಲೆ EOW ದಾಳಿ: ಆದಾಯಕ್ಕಿಂತ 650ಕ್ಕೂ ಹೆಚ್ಚು ಪಟ್ಟು ಅಕ್ರಮ ಆಸ್ತಿ ಬಯಲು
ಶಾಲೆಯಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಖಾಸಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ. ಯಾವುದೇ ಮಾರ್ಗಸೂಚಿ, ಅನುಮತಿಯನ್ನು ಕೊಟ್ಟಿಲ್ಲ ಎಂದು ಉತ್ತರಿಸಿದ್ದಾರೆ.
Big alert: ʻಪಂಜಾಬ್ ನ್ಯಾಷನಲ್ ಬ್ಯಾಂಕ್ʼ ಗ್ರಾಹಕರ ಗಮನಕ್ಕೆ: ಆ. 31 ರೊಳಗೆ KYC ಅಪ್ಡೇಟ್ ಮಾಡಲು ಸೂಚನೆ
ಹಿಂದೆ ಯಾವ ನಿಯಮಗಳು ಇದ್ದವೋ ಅದೇ ನಿಯಮ ಈಗಲೂ ಇವೆ. ಗಣೇಶ ಹಬ್ಬ ಬಿಜೆಪಿ ಸರ್ಕಾರ ಬಂದಾಗಿನಿಂದ ಮಾಡಿದ್ದು ಅಲ್ಲ. ಬ್ರಿಟಿಷರ ಕಾಲದಿಂದಲೂ ಗಣೇಶೋತ್ಸವ ಮಾಡಿಕೊಂಡು ಬರಲಾಗ್ತಿದೆ. ಹಿಂದೆ ಯಾವ ರೀತಿ ನಡೆಯುತ್ತಿತ್ತೋ ಅದೇ ರೀತಿ ನಡೆದುಕೊಂಡು ಬರಲಿದೆ. ಶಿಕ್ಷಣ ಇಲಾಖೆಯಿಂದ ಅನುಮತಿ ಕೊಟ್ಟಿದ್ದಾರೆ ಅನ್ನೋದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.
ಮಧ್ಯಪ್ರದೇಶದ RTO ಅಧಿಕಾರಿಯ ನಿವಾಸದ ಮೇಲೆ EOW ದಾಳಿ: ಆದಾಯಕ್ಕಿಂತ 650ಕ್ಕೂ ಹೆಚ್ಚು ಪಟ್ಟು ಅಕ್ರಮ ಆಸ್ತಿ ಬಯಲು
ಈಗ ಇರೋ ನಿಯಮಗಳೇ ಮುಂದೆಯೂ ಇರಲಿದೆ. ನಮಾಜ್ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ. ಶಾಲೆಗಳಲ್ಲಿ ಹೊಸ ಹೊಸ ಸಂಪ್ರದಾಯ ಹುಟ್ಟುಹಾಕೋಕೆ ಅವಕಾಶ ಇಲ್ಲ ಎಂದು ಸಚಿವರು ಹೇಳಿದ್ದಾರೆ.
Big alert: ʻಪಂಜಾಬ್ ನ್ಯಾಷನಲ್ ಬ್ಯಾಂಕ್ʼ ಗ್ರಾಹಕರ ಗಮನಕ್ಕೆ: ಆ. 31 ರೊಳಗೆ KYC ಅಪ್ಡೇಟ್ ಮಾಡಲು ಸೂಚನೆ
ಮುಸ್ಲಿಂ ಮುಖಂಡ ಉಮರ್ ಷರೀಫ್ ಸಹ ಈ ಬಗ್ಗೆ ಮಾತನಾಡಿದ್ದು, ಗಣಪ ಓಕೆ ಹಿಜಬ್ಗೂ ಹೀಗೆ ಅವಕಾಶ ಕೊಡಿ. ಒಂದು ಧರ್ಮಕ್ಕೆ ನ್ಯಾಯ ಇನ್ನೊಂದು ಧರ್ಮಕ್ಕೆ ಅನ್ಯಾಯ ಯಾಕೆ ಅಂತಾ ಪ್ರಶ್ನಿಸಿದ್ದಾರೆ.
ಮಧ್ಯಪ್ರದೇಶದ RTO ಅಧಿಕಾರಿಯ ನಿವಾಸದ ಮೇಲೆ EOW ದಾಳಿ: ಆದಾಯಕ್ಕಿಂತ 650ಕ್ಕೂ ಹೆಚ್ಚು ಪಟ್ಟು ಅಕ್ರಮ ಆಸ್ತಿ ಬಯಲು