ಬೆಂಗಳೂರು : 2025-26 ನೇ ಸಾಲಿನಲ್ಲಿ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಚಾರ ಗೋಷ್ಠಿ ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ನಾಟಕ ಸ್ಪರ್ಧೆ ಆಯೋಜಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
2025-26ನೇ ಸಾಲಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಸಲುವಾಗಿ ವಿಜ್ಞಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಾದ ವಿಜ್ಞಾನ ವಿಚಾರ ಗೋಷ್ಠಿ, ವಿಜ್ಞಾನ ನಾಟಕ ಸ್ಪರ್ಧೆ, ವಿಜ್ಞಾನ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ಸಾಲಿನ ಕಾರ್ಯಕ್ರಮಗಳನ್ನು ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ.
ರಾಜ್ಯದ ಎಲ್ಲಾ ಡಯಟ್ ಪ್ರಾಂಶುಪಾಲರ ಉಸ್ತುವಾರಿ ಮತ್ತು ಮಾರ್ಗದರ್ಶನದಲ್ಲಿ, ವಿಜ್ಞಾನ ವಿಚಾರ ಗೋಷ್ಠಿ ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ನಾಟಕ ಸ್ಪರ್ಧೆಗಳನ್ನು ಆಯಾ ಡಯಟ್ ವ್ಯಾಪ್ತಿಯ ಶಾಲಾ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯದ ಹಂತದವರೆಗೆ ಆಯೋಜಿಸಬೇಕಿದೆ.
ವಿಜ್ಞಾನ ವಿಚಾರ ಗೋಷ್ಠಿ, ವಿಜ್ಞಾನ ನಾಟಕ ಸ್ಪರ್ಧೆ ಮತ್ತು ವಿಜ್ಞಾನ ವಸ್ತು ಪ್ರದರ್ಶನಗಳ ಮುಖ್ಯ
ಉದ್ದೇಶಗಳು
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು.
*ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅನ್ವೇಷಣೆ ಮತ್ತು ವಿಶ್ಲೇಷಣಾತ್ಮಕ ಪ್ರವೃತ್ತಿಯನ್ನು ಜಾಗೃತಗೊಳಿಸುವುದು.
ಅರಳುತ್ತಿರುವ ವಿಜ್ಞಾನಿಗಳಿಗೆ ವಿಚಾರ ವಿನಿಮಯಕ್ಕೆ ವೇದಿಕೆ ಸೃಷ್ಟಿಸುವುದು.
ಮೂಢನಂಬಿಕೆಗಳು ಹಾಗೂ ಕಂದಾಚಾರಗಳನ್ನು ಹೋಗಲಾಡಿಸುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು
ರಾಜ್ಯದ ಎಲ್ಲಾ ಯುವ ಪ್ರತಿಭೆಗಳಲ್ಲಿ ರಾಷ್ಟ್ರೀಯ ಏಕತೆಯ ಭಾವನೆ ಬೆಳೆಸುವುದು.
1. ವಿಜ್ಞಾನ ನಾಟಕ
ಸ್ಪರ್ಧೆಯಲ್ಲಿ ಪ್ರದರ್ಶಿಸುವ ವಿಜ್ಞಾನ ನಾಟಕಗಳನ್ನು ಈ ಕೆಳಗಿನಂತೆ ಅಂಕಗಳನ್ನು ನೀಡಿ ನಿರ್ಣಯಿಸುವುದು. ಗರಿಷ್ಠ ಅಂಕಗಳು 100 ಆಗಿರುತ್ತದೆ.
ತಾಲ್ಲೂಕು ಹಂತದ ಸ್ಪರ್ಧೆಯನ್ನು ಡಯಟ್ನ ಬ್ಲಾಕ್ ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಕಾರದೊಂದಿಗೆ ಆಯೋಜಿಸುವುದು. ಬ್ಲಾಕ್ ಹಂತದ ಸ್ಪರ್ಧೆಗೆ ಸಾಕಷ್ಟು ಪ್ರಚಾರ ನೀಡಿ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಕ್ರಮ ವಹಿಸುವುದು. ಬ್ಲಾಕ್ ಹಂತದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಡಯಟ್ ಅಧಿಕಾರಿಗಳ ಭಾಗವಹಿಸುವಿಕೆ ಕಡ್ಡಾಯ.