ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಲಭ್ಯವಿರುವ ವಿದ್ಯುತ್ ಸೌಲಭ್ಯದ ಮಾಹಿತಿಯನ್ನು ಸ್ಯಾಟ್ಸ್ ತಂತ್ರಾಂಶದಲ್ಲಿ ಇಂಧೀಕರಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಲಭ್ಯವಿರುವ ವಿದ್ಯುತ್ ಸೌಲಭ್ಯದ ಮಾಹಿತಿಯನ್ನು ಸ್ಯಾಟ್ಸ್ ತಂತ್ರಾಂಶದಲ್ಲಿ ಪರಿಶೀಲಿಸಿದಾಗ ಹಲವು ಶಾಲೆಗಳಲ್ಲಿ ವಿದ್ಯುತ್ ಸೌಲಭ್ಯ ಲಭ್ಯವಿಲ್ಲವೆಂದು ಕಂಡು ಬಂದಿರುತ್ತದೆ. ಅಂತಹ ಶಾಲೆಗಳ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದೆ. ಸದರಿ ಶಾಲೆಗಳ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸದರಿ ಶಾಲೆಯಲ್ಲಿ ಪ್ರಸ್ತುತ ವಿದ್ಯುತ್ ಸೌಲಭ್ಯ ಲಭ್ಯವಿದ್ದಲ್ಲಿ ಈ ಕುರಿತು ಸ್ಮಾಟ್ಸ್ ತಂತ್ರಾಂಶದಲ್ಲಿ ಮಾಹಿತಿಯನ್ನು ಕೂಡಲೇ ನವೀಕರಿಸಲು ಕೋರಿದೆ.
ಮುಂದುವರೆದು ಆ ಶಾಲೆಗಳಲ್ಲಿ ಪ್ರಸ್ತುತ ವಿದ್ಯುತ್ ಸೌಲಭ್ಯ ಲಭ್ಯವಿಲ್ಲದಿದ್ದಲ್ಲಿ ಜಿಲ್ಲಾ ಹಂತದಲ್ಲಿಯೇ ಕೂಡಲೇ ಈ ಬಗ್ಗೆ ಕ್ರಮ ಕೈಗೊಂಡು ಸಂಬಂಧಪಟ್ಟ ವಿದ್ಯುತ್ ಸರಬರಾಜು ನಿಗಮದೊಂದಿಗೆ ನಮನ್ವಯ ಸಾಧಿಸಿ ಅತ್ಯಾದ್ಯತೆಯಾಗಿ ಲಭ್ಯವಿರುವ ಅನುದಾನದಿಂದ ಸದರಿ ಶಾಲೆಗಳಿಗೆ ವಿದ್ಯುತ್ ಸೌಲಭ್ಯ ಒದಗಿಸಲು ಕೋರಿದೆ ಹಾಗೂ ಒದಗಿಸಿದ ಕೂಡಲೇ ಸದರಿ ಮಾಹಿತಿಯನ್ನು ಸ್ಯಾಟ್ಸ್ ತಂತ್ರಾಂಶದಲ್ಲಿ ಇಂಧೀಕರಿಸುವಂತೆ ಕೋರಿದೆ.