ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ( SSLC Students ) ಮುಂಬರುವಂತ ವಾರ್ಷಿಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ( Education Department ) ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಮಾದರಿ ಪ್ರಶ್ನೆಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು 2024ರ 10ನೇ ತರಗತಿ ವಾರ್ಷಿಕ ಪರೀಕ್ಷೆಗೆ ( SSLC Main Exam 2024 ) ಸಂಬಂಧಿಸಿದಂತೆ ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯನ್ನು ( Model Question Paper ) ಬಿಡುಗಡೆ ಮಾಡಲಾಗಿದೆ ಎಂದಿದೆ.
ಪ್ರತಿಯೊಂದು ವಿಷಯದ 5 ಸೆಟ್ ಮಾದರಿ ಪ್ರಶ್ನೆ ಪತ್ರಿಕೆಯನ್ನು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗೋ ನಿಟ್ಟಿನಲ್ಲಿ ಬಿಡುಗಡೆ ಮಾಡಲಾಗಿದೆ.
ಬೆಂಗಳೂರು ದಕ್ಷಿಣ ಡಿಡಿಪಿಐ ಸಿದ್ಧಪಡಿಸಿದ ಮಾದರಿ ಪ್ರಶ್ನೆಪತ್ರಿಕೆಗಳು ಪರೀಕ್ಷೆಯ ಮಾದರಿಗೆ ಅನುಗುಣವಾಗಿ ಸಿದ್ಧತೆಗಳನ್ನು ವಿಶ್ಲೇಷಿಸಲು ಮತ್ತು ಯೋಜಿಸಲು ಬಹಳ ಸಹಾಯಕವಾಗಿವೆ.
ಈ ಪ್ರಶ್ನೆ ಪತ್ರಿಕೆಗಳನ್ನು ಕನ್ನಡ/ ಇಂಗ್ಲಿಷ್/ ಹಿಂದಿ/ ಗಣಿತ/ ವಿಜ್ಞಾನ/ ಸಮಾಜ ವಿಜ್ಞಾನದ ಅನುಭವಿ ಮತ್ತು ನುರಿತ ತಜ್ಞರು ಸಿದ್ಧಪಡಿಸುತ್ತಾರೆ ಎಂದು ತಿಳಿಸಿದೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ವಿಷಯವಾರು ಮಾದರಿ ಪ್ರಶ್ನೆಪತ್ರಿಕೆ ಡೌನ್ ಲೋಡ್ ಮಾಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ಕನ್ನಡ ಪ್ರಥಮ ಭಾಷೆಯ ಮಾದರಿ ಪ್ರಶ್ನೆಪತ್ರಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಕನ್ನಡ ದ್ವಿತೀಯ ಭಾಷೆಯ ಮಾದರಿ ಪ್ರಶ್ನೆಪತ್ರಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಇಂಗ್ಲಿಷ್ ಪ್ರಥಮ ಭಾಷೆಯ ಮಾದರಿ ಪ್ರಶ್ನೆಪತ್ರಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಇಂಗ್ಲೀಷ್ ದ್ವಿತೀಯ ಭಾಷೆಯ ಮಾದರಿ ಪ್ರಶ್ನೆಪತ್ರಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಹಿಂದಿ ತೃತೀಯ ಭಾಷೆಯ ಮಾದರಿ ಪ್ರಶ್ನೆಪತ್ರಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಥಮ ಭಾಷೆ – ಸಂಸ್ಕೃತದ ಮಾದರಿ ಪ್ರಶ್ನೆಪತ್ರಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಗಣಿತ ಭಾಷೆಯ ಮಾದರಿ ಪ್ರಶ್ನೆಪತ್ರಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಜ್ಞಾನ ಭಾಷೆಯ ಮಾದರಿ ಪ್ರಶ್ನೆಪತ್ರಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಸಮಾಜ ವಿಜ್ಞಾನ ಭಾಷೆಯ ಮಾದರಿ ಪ್ರಶ್ನೆಪತ್ರಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಈ ಮೇಲ್ಕಂಡ ಲಿಂಕ್ ನಲ್ಲಿ ವಿಷಯವಾರು ಮಾದರಿ ಪ್ರಶ್ನೆಪತ್ರಿಕೆಗಳಿದ್ದು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಡೌನ್ ಲೋಡ್ ಮಾಡಿಕೊಂಡು, ನಿಮ್ಮ ವಾರ್ಷಿಕ ಪರೀಕ್ಷೆಗೆ ತಯಾರಿ ನಡೆಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕವನ್ನು ಗಳಿಸಿ ಪೋಷಕರಿಗೆ, ಶಾಲೆಗೆ ಕೀರ್ತಿಯನ್ನ ತನ್ನಿ.