ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ ವಹಿಸಲಾಗಿದೆ. ಇದರ ಭಾಗವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವಂತ ಸಿಸಿ ಕ್ಯಾಮರಾಗಳನ್ನು ದುರಸ್ತಿಗೆ ಸೂಚಿಸಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದು, ಮಾರ್ಚ್, ಏಪ್ರಿಲ್ 2024ರಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳು ಸುಸ್ಥಿತಿಯಲ್ಲಿರುವುದನ್ನು ದೃಢಪಡಿಸಿಕೊಳ್ಳಲು, ಪರೀಕ್ಷಾ ಕೇಂದ್ರಗಳಿಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಆಯಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಿಗೆ ಆಯಾ ಜಿಲ್ಲಾ ಉಪನಿರ್ದೇಶಕರ ಮೂಲಕ ಸೂಚಿಸಲಾಗಿತ್ತು ಎಂದಿದ್ದಾರೆ.
ಈ ರೀತಿ ಪರೀಕ್ಷಿಸುವಾಗ ಸಿಸಿ ಕ್ಯಾಮರಾಗಳು ಸುಸ್ಥಿತಿಯಲ್ಲಿ ಇಲ್ಲದೇ ಇದ್ದ ಪಕ್ಷದಲ್ಲಿ ಅವುಗಳನ್ನು ದುರಸ್ಥಿಗೊಳಿಸಲು ತಗಲುವ ವೆಚ್ಚವನ್ನು ಆಯಾ ಪರೀಕ್ಷಾ ಕೇಂದ್ರಗಳಿರುವ ಶಾಲೆ, ಕಾಲೇಜುಗಳಲ್ಲಿ ಲಭ್ಯವಿರುವ ಸಂಚಿತ ನಿಧಿಯಿಂದ ಭರಿಸುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶಿಸಿದ್ದಾರೆ. ಅದರಂತೆ ಕ್ರಮವಹಿಸೋದಕ್ಕೆ ತಿಳಿಸಿದ್ದಾರೆ.
BREAKING: ISROದಿಂದ ‘ಇನ್ಸಾಟ್-3ಡಿಎಸ್ ಹವಾಮಾನ ಉಪಗ್ರಹ’ ಯಶಸ್ವಿಯಾಗಿ ಉಡಾವಣೆ | INSAT-3DS satellite