ಮಂಡ್ಯ: ಅಪಘಾತದಂತ ಸಂದರ್ಭದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವವರ ಸಂಖ್ಯೆ ಕಡಿಮೆ. ಬದಲಾಗಿ ಕಿಸೆಯಲ್ಲಿನ ಮೊಬೈಲ್ ತೆಗೆದು ವೀಡಿಯೋ ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ಇಲ್ಲೊಂದು ಅಪಘಾತವಾಗಿದೆ ಅಂತ ವೀಡಿಯೋ, ಪೋಟೋ ಹಂಚೋರೇ ಹೆಚ್ಚು. ಈ ನಡುವೆಯೂ ತಾವು ತೆರಳುತ್ತಿದ್ದಂತ ಮಾರ್ಗದಲ್ಲಿ ಅಪಘಾತ ಉಂಟಾಗಿ ಚಿಕಿತ್ಸೆಗೆ ಕಾಯುತ್ತಿದ್ದಂತ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಇಂದು ಮಾನವೀಯತೆ ಮೆರೆದಿದ್ದಾರೆ. ಆ ಬಗ್ಗೆ ಮುಂದೆ ಓದಿ.
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕಾರ್ಯಕ್ರಮದಿಂದ ವಾಪಸ್ ಹೋಗುವಾಗ ರಸ್ತೆ ಅಪಘಾತದಲ್ಲಿ ಇಬ್ಬರು ಬಾಲಕರು ಗಾಯಗೊಂಡಿದ್ದು, ಆಸ್ಪತ್ರೆಗೆ ತೆರಳಲು ಆಂಬ್ಯುಲೆನ್ಸ್ಗಾಗಿ ಕಾಯುತ್ತಿದ್ದರು. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರಾರ ಬಿ.ಸಿ. ನಾಗೇಶ್ ಅವರು, ತಮ್ಮ ಭದ್ರತೆ ಕರ್ತವ್ಯದಲ್ಲಿದ್ದ ಪೊಲೀಸ್ ಎಸ್ಕಾರ್ಟ್ ವಾಹನದಲ್ಲಿ ಗಾಯಾಳು ಬಾಲಕರನ್ನು ಬೇಗ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು.
ಬಿಜೆಪಿ ಎಂದರೆ ಕಳ್ಳ, ಮಳ್ಳ, ಸುಳ್ಳರ ಪಕ್ಷ ಎನ್ನಲು ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? – ಕಾಂಗ್ರೆಸ್ ಪ್ರಶ್ನೆ
ಮಾರ್ಗ ಮಧ್ಯೆ ಆಂಬ್ಯುಲೆನ್ಸ್ ಬಂದ ಬಳಿಕ ಇಬ್ಬರು ಬಾಲಕರನ್ನು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಮೂಲಕ ಅಪಘಾತದಲ್ಲಿ ಗಾಯಗೊಂಡಿದ್ದಂತ ಬಾಲಕನಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿ, ಪ್ರಾಣಾಪಾಯದಿಂದ ಪಾರಾಗೋದಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನೆರವಾಗಿದ್ದಾರೆ.