ಬೆಂಗಳೂರು: ವಿಪಕ್ಷ ನಾಯಕ ಸಿದ್ಧರಾಮಯ್ಯ ( Opposition leader Siddaramaiah ) ವಿರುದ್ಧ, ಟ್ವಿಟ್ಟರ್ ನಲ್ಲಿ ( Twitter ) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಸಮರವನ್ನೇ ಸಾರಿದ್ದಾರೆ. ಅಲ್ಲದೇ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಮಾತನಾಡಿದ್ದಂತ ಸಿದ್ಧರಾಮಯ್ಯ ವಿರುದ್ಧ ವಾಗ್ಧಾಳಿಯನ್ನೇ ನಡೆಸಿದ್ದಾರೆ.
ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ನಿಮ್ಮ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್ಇ ಶಾಲೆಗಳ ಆರಂಭಕ್ಕೆ NOC ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ಸಿದ್ಧರಾಮಯ್ಯ ಪಾತ್ರ ಏನು? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್ಸಿ ಶಾಲೆಗಳ ಆರಂಭಕ್ಕೆ NOC ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ @siddaramaiah ಪಾತ್ರ ಏನು? (1/4) #ಭ್ರಷ್ಟಕಾಂಗ್ರೆಸ್ https://t.co/PnbzcLqeQR
— B.C Nagesh (@BCNagesh_bjp) September 11, 2022
ಪಾರದರ್ಶಕ, ಪ್ರಾಮಾಣಿಕ, ಸುರಕ್ಷಿತ ಶೈಕ್ಷಣಿಕ ವಾತಾವರಣ ನಿರ್ಮಿಸಲು ಹೊರಟ ಬಿಜೆಪಿ ಸರ್ಕಾರದ ವಿರುದ್ಧ, ಕ್ರಿಮಿನಲ್ ಕೇಸ್ ಸೇರಿ ಹಲವು ಆರೋಪಗಳಿರುವ ಬೆಂಬಲಿಗನ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಿಸಿ, ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವ ನಿಮಗೆ ಮಾತನಾಡಲು ಯಾವ ನೈತಿಕತೆ ಇದೆ? ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? ಎಂದು ವಾಗ್ಧಾಳಿ ನಡೆಸಿದ್ದಾರೆ.
ಪಾರದರ್ಶಕ, ಪ್ರಾಮಾಣಿಕ, ಸುರಕ್ಷಿತ ಶೈಕ್ಷಣಿಕ ವಾತಾವರಣ ನಿರ್ಮಿಸಲು ಹೊರಟ ಬಿಜೆಪಿ ಸರ್ಕಾರದ ವಿರುದ್ಧ, ಕ್ರಿಮಿನಲ್ ಕೇಸ್ ಸೇರಿ ಹಲವು ಆರೋಪಗಳಿರುವ ಬೆಂಬಲಿಗನ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಿಸಿ, ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವ ನಿಮಗೆ ಮಾತನಾಡಲು ಯಾವ ನೈತಿಕತೆ ಇದೆ?
ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? (2/4)— B.C Nagesh (@BCNagesh_bjp) September 11, 2022
2004ರಲ್ಲಿ ತಮಿಳುನಾಡಿನ ಕುಂಭಕೋಣಂನ ಶಾಲೆಯೊಂದರಲ್ಲಿ ನಡೆದ ಅಗ್ನಿದುರಂತದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುಪ್ರೀಂಕೋರ್ಟ್ ಆದೇಶದ ಅನುಸಾರ ರೂಪಿಸಿರುವ ನಿಯಮಗಳು, ಮಾರ್ಗಸೂಚಿಗಳನ್ನೇ ನೀವು ಪ್ರಶ್ನಿಸುತ್ತಿದ್ದೀರಿ! ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಸಿದ್ಧರಾಮಯ್ಯ ನಿಮಗೆ ಕಾಳಜಿ ಇಲ್ಲವೇ? ಎಂದು ಕೇಳಿದ್ದಾರೆ.
2004ರಲ್ಲಿ ತಮಿಳುನಾಡಿನ ಕುಂಭಕೋಣಂನ ಶಾಲೆಯೊಂದರಲ್ಲಿ ನಡೆದ ಅಗ್ನಿದುರಂತದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುಪ್ರೀಂಕೋರ್ಟ್ ಆದೇಶದ ಅನುಸಾರ ರೂಪಿಸಿರುವ ನಿಯಮಗಳು, ಮಾರ್ಗಸೂಚಿಗಳನ್ನೇ ನೀವು ಪ್ರಶ್ನಿಸುತ್ತಿದ್ದೀರಿ!
ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ @siddaramaiah ನಿಮಗೆ ಕಾಳಜಿ ಇಲ್ಲವೇ? (3/4)
— B.C Nagesh (@BCNagesh_bjp) September 11, 2022
ಖಾಸಗಿ ಶಾಲೆ ಪ್ರಥಮ ಮಾನ್ಯತೆ & ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಆನ್ಲೈನ್ಗೊಳಿಸಿ, ಪಾರದರ್ಶಕ ವ್ಯವಸ್ಥೆಯನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸಿದೆ. ಆದರೆ, ಶಿಸ್ತುಬದ್ಧ ವ್ಯವಸ್ಥೆಯ ಅನುಷ್ಠಾನದ ವಿರುದ್ಧವೇ ನಿಂತು, ಸಂಘಟನೆಯ ಅಧ್ಯಕ್ಷನೆಂದು ಹೇಳಿಕೊಂಡು ಓಡಾಡುವ ಬೂಟಾಟಿಕೆಯ ವ್ಯಕ್ತಿಯ ಅಕ್ರಮದಲ್ಲಿ ಸಿದ್ಧರಾಮಯ್ಯನವರ ಪಾಲೆಷ್ಟು ಎಂದು ಪ್ರಶ್ನಿಸಿದ್ದಾರೆ.
ಖಾಸಗಿ ಶಾಲೆ ಪ್ರಥಮ ಮಾನ್ಯತೆ & ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಆನ್ಲೈನ್ಗೊಳಿಸಿ, ಪಾರದರ್ಶಕ ವ್ಯವಸ್ಥೆಯನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸಿದೆ. ಆದರೆ, ಶಿಸ್ತುಬದ್ಧ ವ್ಯವಸ್ಥೆಯ ಅನುಷ್ಠಾನದ ವಿರುದ್ಧವೇ ನಿಂತು, ಸಂಘಟನೆಯ ಅಧ್ಯಕ್ಷನೆಂದು ಹೇಳಿಕೊಂಡು ಓಡಾಡುವ ಬೂಟಾಟಿಕೆಯ ವ್ಯಕ್ತಿಯ ಅಕ್ರಮದಲ್ಲಿ @siddaramaiah ಪಾಲೆಷ್ಟು? (4/4)
— B.C Nagesh (@BCNagesh_bjp) September 11, 2022