ಮಂಡ್ಯ : ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮ ನಿಮಿತ್ತ ಮಂಡ್ಯಗೆ ತೆರಳುತ್ತಿದ್ದ ಸಚಿವರನ್ನು ಮದ್ದೂರು ಶಾಸಕ ಕೆ.ಎಂ.ಉದಯ್ ಅವರ ಕೋರಿಕೆ ಮೇರೆಗೆ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಕೊಠಡಿಗಳ ಅವ್ಯವಸ್ಥೆ ಹಾಗೂ ಸಮಸ್ಯೆ ಕುರಿತಂತೆ ಶಾಲಾ ಮಕ್ಕಳೊಂದಿಗೆ ಚರ್ಚಿಸಿದರು.
ನಂತರ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಸಚಿವರು ಶಾಲೆಯ ಸಮಸ್ಯೆಗಳ ಬಗ್ಗೆ ಅಹವಾಲು ಆಲಿಸಿದರು.
ಬಳಿಕ ಮಕ್ಕಳೊಂದಿಗೆ ದಿನನಿತ್ಯ ನೀಡುವ ಬಿಸಿಯೂಟದ ಬಗ್ಗೆ ಮಾಹಿತಿ ಪಡೆದರು. ಮತ್ತೆ ವಾರಕ್ಕೆರಡು ಬಾರಿ ಕಡ್ಡಾಯವಾಗಿ ಶಾಲೆಯಲ್ಲಿ ಊಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲಾಗುತ್ತಿದೆ ಎಂಬ ಬಗ್ಗೆ ಸಚಿವರು ಮಕ್ಕಳಿಂದಲೇ ಮಾಹಿತಿ ಪಡೆದುಕೊಂಡರು.
ಬಳಿಕ ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಗಳೊಂದಿಗೆ ನೆಲದ ಮೇಲೆ ಕುಳಿತು ಸಹಪಂಕ್ತಿ ಭೋಜನ ಮಾಡಿದರು. ಸಚಿವರ ಆಗಮನದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಊಟದ ಸೊಪ್ಪಿನ ಪಲ್ಯ, ಅಪ್ಪಳ, ಮೊಟ್ಟೆ, ಮುದ್ದೆ, ಅನ್ನ, ತರಕಾರಿ ಸಾಂಬಾರ್, ರಸಂ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು.
ಶಾಸಕರಾದ ಕೆ.ಎಂ.ಉದಯ್, ಮಂಡ್ಯ ಶಾಸಕ ಗಣಿಗ ರವಿ, ಅವರೊಂದಿಗೆ ಕೂಡಿ ಬೋಜನ ಸವಿದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಧ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಛಾಯಾಚಿತ್ರ ತೆಗೆಸಿಕೊಂಡ ನಂತರ ನಿರ್ಗಮಿಸಿದರು.
ವರದಿ : ಗಿರೀಶ್ ರಾಜ್, ಮಂಡ್ಯ
ರೈತರಿಗೆ ಗುಡ್ ನ್ಯೂಸ್: ಸೆ.2ರಿಂದ ರಾಜ್ಯಾಧ್ಯಂತ ‘1-5 ನಮೂನೆ ಡಿಜಿಟಲ್ ಪೋಡಿ’ ದುರಸ್ಥಿ ಅಭಿಯಾನ
BREAKING: ಬೆಂಗಳೂರಲ್ಲಿ ‘ಗೌರಿ-ಗಣೇಶ ಹಬ್ಬ’ಕ್ಕೆ ‘ಪೊಲೀಸ್ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ: ಇವುಗಳ ಪಾಲನೆ ಕಡ್ಡಾಯ
ಬ್ಯಾಂಕ್ ಗ್ರಾಹಕರೇ ಗಮನಿಸಿ : `ಸೆಪ್ಟೆಂಬರ್’ ತಿಂಗಳಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ!Bank Holidays