Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಕ್ಷಣ, ಸಂಘಟನೆ, ಹೋರಾಟ – ಶೋಷಿತವರ್ಗಗಳಿಗೆ ಮೂಲಮಂತ್ರವಾಗಬೇಕು: ಸಿಎಂ ಸಿದ್ಧರಾಮಯ್ಯ
KARNATAKA

ಶಿಕ್ಷಣ, ಸಂಘಟನೆ, ಹೋರಾಟ – ಶೋಷಿತವರ್ಗಗಳಿಗೆ ಮೂಲಮಂತ್ರವಾಗಬೇಕು: ಸಿಎಂ ಸಿದ್ಧರಾಮಯ್ಯ

By kannadanewsnow0921/04/2025 2:20 PM

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗಮಾತ್ರ ಗುಲಾಮಗಿರಿಯನ್ನು ನೀಗಿಸಿ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ರಾಜ್ಯ ಗೊಲ್ಲ(ಯಾದವ) ಹಣಬರ ಸಂಘದ ಶತಮಾನೋತ್ಸವ ಹಾಗೂ ಶ್ರೀ ಯಾದವಾನಂದ ಸ್ವಾಮಿಗಳ 16 ನೇ ಪಟ್ಟಾಭಿಷೆಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯಾದವ ಸಂಘಕ್ಕೆ ನೂರು ವರ್ಷಗಳು ಸಂದಿದ್ದು, ಸಮಾಜವನ್ನು ಸಂಘಟಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಎಲ್ಲ ಜಾತಿಗಳು ತಮ್ಮ ಕಸುಬಿನಿಂದಲೇ ನಿರ್ಮಾರ್ಣವಾಗಿವೆ. ಸಮಾಜವನ್ನು ವಿಭಜಿಸಲು, ಕಸುಬಿನ ಆಧಾರದಲ್ಲಿ ಜಾತಿಯೆಂದು ಕರೆಯಲಾಯಿತು. ಗೊಲ್ಲ ಜಾತಿಯಲ್ಲಿ ,ಕಾಡು ಗೊಲ್ಲ, ಅಡವಿ ಗೊಲ್ಲ ಸೇರಿದಂತೆ ಹಲವು ಉಪಜಾತಿಗಳಿವೆ ಎಂದರು.

ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರು

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ದೀನದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಅವಕಾಶವಂಚಿತರು ಸಮಾಜದಲ್ಲಿ ಏಳಿಗೆಯನ್ನು ಕಾಣಲು ಶಿಕ್ಷಣ ಅತ್ಯಗತ್ಯ. ಶಿಕ್ಷಣ, ಸಂಘಟನೆ , ಹೋರಾಟ ಎಂಬ ಮೂರುಮಂತ್ರಗಳನ್ನು ಶೋಷಿತವರ್ಗಗಳಿಗೆ ಬೋಧಿಸಿದ್ದಾರೆ. ಸಮಾಜದಲ್ಲಿ ಅಸಮಾನತೆ ಸಾಕಷ್ಟಿದೆ. ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮನುಸ್ಮೃತಿಯ ಪಾಲನೆಯಿಂದ, ಸಮಾಜದಲ್ಲಿ ತಂದು, ಬ್ರಾಹ್ಮಣರು, ವೈಶ್ಯರು,ಕ್ಷತ್ರಿಯರು ಹಾಗೂ ಶೂದ್ರರು ಎಂದು ಚತುರ್ವಣ ಪದ್ಧತಿಯನ್ನು ಜಾರಿಗೆ ತಂದು, ಶೂದ್ರರನ್ನು ಶಿಕ್ಷಣದ ಅವಕಾಶವನ್ನು ನೀಡಲಾಗಿರಲಿಲ್ಲ. ಆದ್ದರಿಂದ ಸಮಾನ ಅವಕಾಶ ಹಾಗೂ ಶಿಕ್ಷಣ ಪಡೆದ ವರ್ಗಗಳಷ್ಟೇ ಸಮಾಜದಲ್ಲಿ ಉನ್ನತಿಯನ್ನು ಕಾಣಲು ಸಾಧ್ಯವಾಯಿತು ಎಂದರು.

ಸಮಾನತೆಯಿಂದ ಸಮಾಜದ ಅಭಿವೃದ್ಧಿ

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯಿರುವ ವೈರುಧ್ಯದ ಸಮಾಜದಲ್ಲಿ ಕಾಲಿಡುತ್ತಿದ್ದೇವೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ರವರು ತಿಳಿಸಿದ್ದರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಸಮಾಜದಲ್ಲಿ ಅವಕಾಶ ವಂಚಿತರಿಗೆ, ಬಡವರಿಗೆ, ಶೋಷಿತರಿಗೆ ಸಮಾನ ಅವಕಾಶ ಹಾಗೂ ಸಮಾನತೆಯನ್ನು ಪಡೆಯಲು ಹೋರಾಟ ಮಾಡಬೇಕು ಎಂದರು.

1918ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಸಂಬಂಧ ಮಿಲ್ಲರ್ ಆಯೋಗವನ್ನು ರಚಿಸಿದರು. ಬ್ರಾಹ್ಮಣೇತರ ಸಮುದಾಯಗಳಿಗೆ ಶೇ.75 ರಷ್ಟು ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ನೀಡಲಾಯಿತು. ನಂತರ ಮೀಸಲಾತಿ ಸೌಲಭ್ಯಕ್ಕಾಗಿ ಹಲವು ಆಯೋಗಗಳನ್ನು ರಚಿಸಲಾಗಿದೆ. ಶಿಕ್ಷಣ ಪಡೆಯದಿದ್ದರೆ ಗುಲಾಮಗಿರಿ ಹೆಚ್ಚಲಿದ್ದು, ಸ್ವಾಭಿಮಾನದ ಬದುಕು ಸಾಧ್ಯವಾಗುವುದಿಲ್ಲ. ಶಿಕ್ಷಣ ಪಡೆದಿದ್ದರಿಂದ ಮಾತ್ರ ಮುಖ್ಯಮಂತ್ರಿಯ ಹುದ್ದೆಗೇರಲು ಸಾಧ್ಯವಾಯಿತು ಎಂದು ಮುಖ್ಯಮಂತ್ರಿಗಳು ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ, ಶಿಕ್ಷಣದ ಮಹತ್ವವನ್ನು ಸಭಿಕರಿಗೆ ವಿವರಿಸಿದರು.

ಸಮಾಜಕ್ಕೆ ಆರ್ಥಿಕ ಸಹಾಯ ನೀಡಲು ಸಿಎಂ ಭರವಸೆ

ಗೊಲ್ಲ ಸಮಾಜದವರೂ ಸೇರಿದಂತೆ ಎಲ್ಲ ತಳಸಮುದಾಯದವರು ಉತ್ತಮ ಶಿಕ್ಷಣ ಪಡೆದು ವೈದ್ಯರು, ಐಪಿಎಸ್-ಐಎಎಸ್ ಅಧಿಕಾರಿಗಳು, ವಕೀಲರಾಗಬಹುದು. ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆಇದೆ. ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಆರ್ಥಿಕ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸಮಾಜದ ಸಂಘಟನೆಯತ್ತ ಯಾದವ ಸಮುದಾಯದ ಮುಖಂಡರು ಗಮನಹರಿಸಬೇಕು ಎಂದರು.

ಸಾಗರದಲ್ಲಿ ಬೈಕ್ ವೀಲ್ಹಿಂಗ್ ಮಾಡೋರೇ ಎಚ್ಚರ! ಮೂವರು ಅಪ್ರಾಪ್ತರು, ಪೋಷಕರ ವಿರುದ್ಧ ‘FIR’ ದಾಖಲು

BIG NEWS: ಎಲ್ಲಾ ಪೌರ ಕಾರ್ಮಿಕರನ್ನು ಖಾಯಂ, ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ: ಸಿಎಂ ಸಿದ್ದರಾಮಯ್ಯ ಘೋಷಣೆ

Share. Facebook Twitter LinkedIn WhatsApp Email

Related Posts

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

16/02/2026 9:19 PM1 Min Read

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM1 Min Read

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM1 Min Read
Recent News

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM

ನಿಮ್ಗೆ ಗೊತ್ತಾ.? ‘ಎಂ.ಎಸ್ ಧೋನಿ’ಗೆ ಪ್ರತಿ ತಿಂಗಳು 70,000 ರೂ. ಪಿಂಚಣಿ ; ‘BCCI’ ನೀಡುವ ನಿವೃತ್ತಿ ಸೌಲಭ್ಯಗಳಿವು.!

16/02/2026 9:42 PM
State News
KARNATAKA

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

By kannadanewsnow0916/02/2026 9:19 PM KARNATAKA 1 Min Read

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ…

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.