Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

ನನ್ನ ರಾಜೀನಾಮೆ ಬಳಿಕ ಪರಮೇಶ್ವರ್ ಗೆ ಸಿಎಂ ಸ್ಥಾನ ಕೊಡಿ : ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ ಸಿದ್ದರಾಮಯ್ಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳದ ಎಫೆಕ್ಟ್: ಹೋಟೆಲ್ ತಿಂಡಿ-ಊಟದ ದರ ಹೆಚ್ಚಳಕ್ಕೆ ಮಾಲೀಕರ ನಿರ್ಧಾರ
KARNATAKA

BIG NEWS: ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳದ ಎಫೆಕ್ಟ್: ಹೋಟೆಲ್ ತಿಂಡಿ-ಊಟದ ದರ ಹೆಚ್ಚಳಕ್ಕೆ ಮಾಲೀಕರ ನಿರ್ಧಾರ

By ವಸಂತ ಬಿ ಈಶ್ವರಗೆರೆ

ಬೆಳಗಾವಿ: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಹಾಗೂ ಪಿಎನ್​​ಜಿ ಗ್ಯಾಸ್ ದರದಲ್ಲಿ ಏಕಾಏಕಿ ಭಾರಿ ಏರಿಕೆ ಕಂಡುಬಂದಿರುವುದು ಬೆಳಗಾವಿಯ ಹೋಟೆಲ್ ಉದ್ಯಮಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 993 ರೂ. ಹಾಗೂ ಪಿಎನ್​​ಜಿ ದರದಲ್ಲಿ 27 ರೂ.ಗಳಷ್ಟು ಹೆಚ್ಚಳವಾಗಿರುವುದರಿಂದ ಹೋಟೆಲ್ ಉದ್ಯಮವನ್ನು ನಡೆಸುವುದು ದುಸ್ತರವಾಗಿದೆ ಎಂದು ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರ ಇಂತಹ ನಿರ್ಧಾರ ಕೈಗೊಂಡಿರುವುದು ಸಾಮಾನ್ಯ ನಾಗರಿಕರ ಮತ್ತು ಸಣ್ಣ ಉದ್ಯಮಿಗಳ ಬೇಸರಕ್ಕೆ ಕಾರಣವಾಗಿದೆ. ಬೆಳಗಾವಿ ನಗರವೊಂದರಲ್ಲೇ ಸಣ್ಣ ಮತ್ತು ದೊಡ್ಡ ಮಟ್ಟದ ಸುಮಾರು 400 ಹೋಟೆಲ್​ಗಳಿದ್ದು, ಈ ಬೆಲೆ ಏರಿಕೆಯಿಂದಾಗಿ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೋಟೆಲ್ ಮಾಲೀಕರ ಅಸಮಾಧಾನ ಮತ್ತು ಮುಂದಿನ ನಡೆ

ಈ ಕುರಿತು ಮಾಹಿತಿ ನೀಡಿರುವ ಬೆಳಗಾವಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಅಜಯ್ ಪೈ ಅವರು, ಈಗಾಗಲೇ ಅಡುಗೆ ಎಣ್ಣೆ ಮತ್ತು ಬೇಳೆಕಾಳುಗಳ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮವು ಸಾಕಷ್ಟು ಹೊಡೆತ ತಿಂದಿತ್ತು. ಆದರೂ ಗ್ರಾಹಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಈವರೆಗೆ ಬೆಲೆ ಏರಿಕೆ ಮಾಡದೆ ಉದ್ಯಮವನ್ನು ನಡೆಸಿಕೊಂಡು ಬರಲಾಗುತ್ತಿತ್ತು. ಆದರೆ ಈಗ ಏಕಾಏಕಿ ಗ್ಯಾಸ್ ಬೆಲೆಯಲ್ಲಿ ಶೇ.35ರಷ್ಟು ಹೆಚ್ಚಳ ಮಾಡಿರುವುದು ತಿಂಡಿ, ತಿನಿಸು ಹಾಗೂ ಊಟದ ದರವನ್ನು ಏರಿಸುವುದನ್ನು ಅನಿವಾರ್ಯವಾಗಿಸಿದೆ ಎಂದು ತಿಳಿಸಿದ್ದಾರೆ. ಮುಂದಿನ ಎರಡ್ಮೂರು ದಿನಗಳಲ್ಲಿ ಹೋಟೆಲ್ ಮಾಲೀಕರ ಸಂಘದ ಎಲ್ಲಾ ಸದಸ್ಯರ ತುರ್ತು ಸಭೆಯನ್ನು ಕರೆದು, ಹೊಸ ದರ ನಿಗದಿಯ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದರ ತಾರತಮ್ಯ ಮತ್ತು ಪರ್ಯಾಯ ಮಾರ್ಗಗಳ ಚಿಂತನೆ

ಗ್ಯಾಸ್ ಬೆಲೆ ಏರಿಕೆಗೆ ಪರ್ಯಾಯವಾಗಿ ಹೋಟೆಲ್‌ಗಳಲ್ಲಿ ಜೈವಿಕ ಇಂಧನ, ವಿದ್ಯುತ್, ಡೀಸೆಲ್ ಅಥವಾ ಕೆರೋಷಿನ್ ಒಲೆಗಳನ್ನು ಬಳಸುವ ಬಗ್ಗೆಯೂ ಮಾಲೀಕರು ಗಂಭೀರವಾಗಿ ಚಿಂತನೆ ನಡೆಸುತ್ತಿದ್ದಾರೆ. ಇದೇ ವೇಳೆ ಪಿಎನ್​ಜಿ ಗ್ಯಾಸ್ ದರದಲ್ಲಿ ಜಿಲ್ಲೆಯಿಂದ ಜಿಲ್ಲೆಗೆ ಇರುವ ತಾರತಮ್ಯದ ಬಗ್ಗೆಯೂ ಅಜಯ್ ಪೈ ಅವರು ಪ್ರಶ್ನಿಸಿದ್ದಾರೆ. ಬೆಂಗಳೂರು ಮತ್ತು ದಾವಣಗೆರೆಯಂತಹ ಜಿಲ್ಲೆಗಳಿಗೆ ಹೋಲಿಸಿದರೆ ಬೆಳಗಾವಿಯಲ್ಲಿ ಪಿಎನ್​ಜಿ ದರ ಹೆಚ್ಚಿರುವುದಕ್ಕೆ ಕಾರಣ ಕೇಳಿ ಚೇಂಬರ್ ಆಫ್ ಕಾಮರ್ಸ್ ಮೂಲಕ ಗ್ಯಾಸ್ ಏಜೆನ್ಸಿಗೆ ಪತ್ರ ಬರೆಯಲಾಗಿದೆ. ಒಂದು ವೇಳೆ ಸರ್ಕಾರ ಮಧ್ಯಪ್ರವೇಶಿಸಿ ತಕ್ಷಣವೇ ಗ್ಯಾಸ್ ಬೆಲೆ ಇಳಿಸದಿದ್ದರೆ, ಅನಿವಾರ್ಯವಾಗಿ ಸಣ್ಣ ಹೋಟೆಲ್ ಮತ್ತು ಕ್ಯಾಂಟೀನ್‌ಗಳನ್ನು ಮುಚ್ಚುವ ಪರಿಸ್ಥಿತಿ ಬರಬಹುದು ಎಂದು ಉದ್ಯಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

BIG NEWS: ಮೇ.20ರಿಂದ ರಾಜ್ಯದಲ್ಲಿ ಸಾರಿಗೆ ಸಮರ: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ನಿರ್ಧಾರ

ಸ್ಥಳೀಯರಿಗೆ ಹೆಚ್ಚು ಉದ್ಯೋಗ ಕಲ್ಪಿಸಿ: ಕೈಗಾರಿಕೋದ್ಯಮಿಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ಮನವಿ

Share. Facebook Twitter LinkedIn WhatsApp Email

Related Posts

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

1 Min Read

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

1 Min Read

ನನ್ನ ರಾಜೀನಾಮೆ ಬಳಿಕ ಪರಮೇಶ್ವರ್ ಗೆ ಸಿಎಂ ಸ್ಥಾನ ಕೊಡಿ : ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ ಸಿದ್ದರಾಮಯ್ಯ!

2 Mins Read
Recent News

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

ನನ್ನ ರಾಜೀನಾಮೆ ಬಳಿಕ ಪರಮೇಶ್ವರ್ ಗೆ ಸಿಎಂ ಸ್ಥಾನ ಕೊಡಿ : ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ ಸಿದ್ದರಾಮಯ್ಯ!

ಸಾರ್ವಜನಿಕರೇ ಗಮನಿಸಿ : ಜೂನ್.1ರಿಂದ ಜಾರಿಗೆ ಬರಲಿವೆ ಈ ಪ್ರಮುಖ ನಿಯಮಗಳು | New Rules from June.1

State News
KARNATAKA

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

By ಸುರೇಶ್‌ KARNATAKA 1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ…

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

ನನ್ನ ರಾಜೀನಾಮೆ ಬಳಿಕ ಪರಮೇಶ್ವರ್ ಗೆ ಸಿಎಂ ಸ್ಥಾನ ಕೊಡಿ : ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ ಸಿದ್ದರಾಮಯ್ಯ!

BIG NEWS : ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಬರಲಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.