ವಿಜಯನಗರ : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಇದೀಗ ರಾಜ್ಯದಲ್ಲಿ ಟೊಮೆಟೊ ದರ ಪಾತಾಳಕ್ಕೆ ಕುಸಿದಿದೆ. 1000-1200 ರೂ. ಇದ್ದ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 100-80 ರೂ.ಗೆ ಕುಸಿದಿದೆ. ಬೆಲೆ ಕುಸಿತದಿಂದ ರೈತರು ಹಾಗೂ ಮಾರಾಟಗಾರರು ನಷ್ಟ ಅನುಭವಿಸುತ್ತಿದ್ದಾರೆ.
ಇರಾನ್ – ಇಸ್ರೇಲ್ ಯುದ್ಧದಿಂದ ಬೇರೆ ದೇಶಗಳಿಗೆ ಟೊಮ್ಯಾಟೋ ರಫ್ತಾಗುತ್ತಿಲ್ಲ. ಅಲ್ಲದೇ ಸಿಲಿಂಡರ್ ಸಿಗದೇ ಹೋಟೆಲ್‍ಗಳು ಸರಿಯಾಗಿ ನಡೆಯದ ಹಿನ್ನೆಲೆ ಟೊಮ್ಯಾಟೋ ವ್ಯಾಪಾರ ಕುಸಿದಿದೆ. ಇದೇ ಕಾರಣಕ್ಕೆ ಟೊಮ್ಯಾಟೋ ಬೆಲೆ ಸಹ ಕುಸಿದಿದೆ.
ವ್ಯಾಪಾರಿಗಳು 20 ರೂ.ಗೆ 2 ರಿಂದ 4 ಕೆಜಿ ಟೊಮ್ಯಾಟೋವನ್ನು ಮಾರಾಟ ಮಾಡುತ್ತಿದ್ದಾರೆ. ಏಕಾಏಕಿ ಟೊಮ್ಯಾಟೋ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಸಾಲ ಮಾಡಿ ಟೊಮ್ಯಾಟೋ ಬೆಳೆದು ಮಾರುಕಟ್ಟೆಗೆ ತರೋ ರೈತರ ಪರಿಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ.








