ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರಿನಲ್ಲಿ ಬಿಜೆಪಿ ನೆಲೆ ಭದ್ರವಾಗಿದ್ದು ಒಗ್ಗಟ್ಟು ಮತ್ತು ಒಂದೇ ಗುರಿಯೊಂದಿಗೆ ಕ್ಷೇತ್ರದಲ್ಲಿ ಕಮಲ ಅರಳಿಸಲು ಶ್ರಮಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸೆ.8ರಂದು ನಡೆಯಲಿರುವ ಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮುಂದೆ ಎದುರಾಗಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಜನೋತ್ಸವ ಕಾರ್ಯಕ್ರಮ ಗಟ್ಟಿ ಅಡಿಪಾಯ ಆಗಬೇಕು ಎಂದರು.
BIGG NEWS: ತೆಲಂಗಾಣದ ಜಿಲ್ಲಾಧಿಕಾರಿ ಮೇಲೆ ಹರಿಹಾಯ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಇನ್ನೇನು ವಿಧಾನಸಭಾ ಚುನಾವಣೆಗಳು ಹತ್ರ ಬರುತ್ತಿದೆ. ಈ ವೇಳೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ್ದರೆ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದೆ.ಹಾಗಾಗಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.ಸರ್ಕಾರದ ರಿಪೋರ್ಚ್ ಕಾರ್ಡ್ ಜನರ ಮುಂದಿಡಬೇಕು. ಅಂತಿಮವಾಗಿ ನಿರ್ಣಯ ಮಾಡುವುದು ಜನಸಾಮಾನ್ಯರೇ ಆಗಿರುವುದರಿಂದ ಜನರ ಮುಂದೆ ಎಲ್ಲ ಮಾಹಿತಿ ಇಡಬೇಕು ಎಂಬ ಉದ್ಧೇಶದಿಂದ ಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.