ಕೊಡಗು : ತಿಮ್ಮಯ್ಯ ಸರ್ಕಲ್ನಲ್ಲಿ ʻ ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧಿಸಿ ಕಾಂಗ್ರೆಸ್ ಮುಖಂಡ ಯು.ಟಿ. ಖಾದರ್ ಮಾತನಾಡಿ ” ಇದು ಪೂರ್ವನಿಯೋಜಿತ ಕೃತ್ಯ” ಎಂದು ಕಿಡಿ ಕಾರಿದ್ದಾರೆ
BIGG NEWS : ಸಾಮಾನ್ಯ ಜನರಿಗೆ ‘UPI’ ಶಾಕ್ ; ವಹಿವಾಟಿನ ಮೇಲೆ ‘ಶುಲ್ಕ’ ವಿಧಿಸಲು ‘RBI’ ನಿರ್ಧಾರ |UPI Charges
ಪ್ರವಾಹ ಪೀಡಿತ ಪ್ರದೇಶ ವೀಕ್ಷಣೆ ತೆರಳಿದ ಮಾಜಿ ಸಿಎಂ ಸಿದ್ದರಾಯ್ಯ ವಿರುದ್ಧ ಮೊಟ್ಟೆ ಎಸೆದಿರುವುದು ಇದು ಪೂರ್ವನಿಯೋಜಿತ ಕೃತ್ಯ, ಕೋಮುವಾದಿಗಳಲ್ಲಿ ಜೊತೆ ರಾಜ್ಯವನ್ನು ನೀಡಲಾಗಿದೆ. ಕೋಮು ಗಲಭೆಗೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿವೆ. ಕಾಂಗ್ರೆಸ್ ಮುಖಂಡ ಯು.ಟಿ. ಖಾದರ್ ಕಿಡಿಕಾರಿದ್ದಾರೆ.
ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.. `ಕೊಡಗಿನ ವಿರೋಧಿ, ಕೊಡವರ ವಿರೋಧಿ ಸಿದ್ದರಾಮಯ್ಯ’ ಎಂಬಿತ್ಯಾದಿ ಘೋಷಣೆಗಳ ಮೂಲಕ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇಲ್ಲಿನ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾಗಿದ್ದು ವಾತಾವರಣ ಉದ್ವಿಗ್ನಗೊಂಡಿದೆ. ಇದೇ ವೇಳೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಈ ಘಟನೆ ಬಳಿಕ ಸ್ಥಳದಲ್ಲಿ ಉದ್ವಿಗ್ಬ ವಾತಾವರಣ ನಿರ್ಮಾಣವಾಗಿದೆ.