ಬೆಂಗಳೂರು: ಮಂಡ್ಯದ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ (L R Shivarame Gowda) ಮನೆ ಮೇಲೆ ಮೊಟ್ಟೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ ಒಂದು ತಿಂಗಳಿನಿಂದ ಸಂಸದ ಪ್ರಜ್ವಲ್ ರೇವಣ್ಣನವರ ಪೆನ್‌ಡ್ರೈವ್‌ಕೇಸಿನಲ್ಲಿ ಶಿವರಾಮೇಗೌಡ ಅವರ ಹೆಸರು ದೊಡ್ಡ ಪ್ರಮಾಣದಲ್ಲಿ ಕೇಳಿ ಬರುತ್ತಿದೆ.
ಈ ನಡುವೆ ಮಾಜಿ ಸಂಸದರು ಜೆಡಿಎಸ್ ವರಿಷ್ಠರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ ದಾಳಿಗೆ ಯತ್ನಿಸಲಾಗಿದೆತಡರಾತ್ರಿ ಕಾರಿನಲ್ಲಿ ಬಂದ ಐದಾರು ಮಂದಿಯಿಂದ ಈ ಯತ್ನ ನಡೆದಿದೆ. ಪೊಲೀಸರು ಕಂಡು ಮನೆ ಮುಂದೆ ಮೊಟ್ಟೆ ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ.