ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿ 15 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮಾಸ್ಕೋದ ಆಗ್ನೇಯ ಜಿಲ್ಲೆಯ ಕಟ್ಟಡದಲ್ಲಿ ರಾತ್ರಿಯಿಡೀ ಫೈರ್ ಅಲಾರಂ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ ಕಾರಣ ಎಂಟು ಜನರು ಬೆಂಕಿಗಾವುತಿಯಾಗಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡ 4 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ಅವಘಡ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದವರು ಬೆಂಕಿ ನಂದಿಸಿದ್ದಾರೆ. ಈ ವೇಳೆ ಕಟ್ಟಡದಲ್ಲಿದ್ದ 200 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

BIGG BREAKING NEWS : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

Shocking news:‌ ವರದಕ್ಷಿಣೆ ನೀಡದಿದ್ದಕ್ಕೆ ಸೋದರ ಸಂಬಂಧಿ ಜೊತೆ ಸೇರಿ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪತಿ

BIGG NEWS : ಆಗಸ್ಟ್ 1 ರಿಂದ ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ

Share.
Exit mobile version