ಉತ್ತರ ಕನ್ನಡ: ಜಿಲ್ಲೆಯಲ್ಲಿ ಒಂದೇ ದಿನ 8 ಜನರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಇವರಲ್ಲಿ ಓರ್ವ ಬಾಲಕನ ಸ್ಥಿತಿ ಗಂಭೀರಗೊಂಡಿದ್ದು, ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಒಂದೇ ದಿನ 8 ಜನರಿಗೆ ಮಂಗನ ಕಾಯಿಲೆ ತಗುಲಿರೋದು ಪರೀಕ್ಷೆಯಿಂದ ದೃಢಪಟ್ಟಿದೆ. ಈ ಮೂಲಕ 10 ದಿನಗಳಲ್ಲಿ ಮಂಗನ ಕಾಯಿಲೆಗೆ ಒಳಗಾದವರ ಸಂಖ್ಯೆ 16ಕ್ಕೆ ಏರಿಕೆಯಾದಂತೆ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ 10 ವರ್ಷದ ಮಗು ಸೇರಿದಂತೆ 8 ಮಂದಿಗೆ ಒಂದೇ ದಿನದಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ. ಮಂಗನ ಕಾಯಿಲೆಗೆ ಒಳಗಾಗಿರುವಂತ 10 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಮಗುವನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
BREAKING: ಜ್ಞಾನವಾಪಿ ಮಸೀದಿ ವಿವಾದದಲ್ಲಿ ಹಿಂದೂಗಳಿಗೆ ದೊಡ್ಡ ಗೆಲುವು: ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ
BREAKING: ‘ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ’ರಾಗಿ ಬಿಸಿಸಿಐ ಕಾರ್ಯದರ್ಶಿ ‘ಜಯ್ ಶಾ’ ಮರು ನೇಮಕ