ಬೆಂಗಳೂರು: ರಾಜ್ಯ ಸರ್ಕಾರದಿಂದ 2021ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಹಾಗೂ 2022 ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರಕಟಮಾಡಿದೆ. ಈ ಬಾರಿ 15 ಸಾಧಕರಿಗೆ ಏಕಲವ್ಯ ಹಾಗೂ ಮೂವರಿಗೆ ಜೀವಮಾನ ಸಾಧನೆಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಈ ಕುರಿತಂತೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪಟ್ಟಿಯನ್ನು ಪ್ರಕಟಿಸಲಾಗಿದೆ. 2021ನೇ ಸಾಲಿನ ಏಕಲವ್ಯ ಪ್ರಶಸ್ತಿಯನ್ನು ಅಥ್ಲೆಟಿಕ್ಸ್ ಕ್ರೀಡಾಪಟು ಚೇತನ್ ಬಿ ಸೇರಿದಂತೆ 15 ಮಂದಿ ಸಾಧಕರಿಗೆ ನೀಡಲಾಗಿರುವುದಾಗಿ ತಿಳಿಸಿದೆ.
BREAKING NEWS: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು
ಅಂದಹಾಗೇ ಕ್ರೀಡಾ ಸಾಧಕರಿಗೆ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಯಲ್ಲಿ ಏಕಲವ್ಯ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗಳು ಒಂದಾಗಿವೆ. ಇಂತಹ ಪ್ರಶಸ್ತಿಯನ್ನು ನಾಳೆ ರಾಜಭವನದ ಗಾಜಿನಮನೆಯಲ್ಲಿ ನಡೆಯುವಂತ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.
BIG BREAKING NEWS: ನಾಳೆ ಮಹಾರಾಷ್ಟ್ರ ಸಚಿವರು ‘ಬೆಳಗಾವಿ ಗಡಿ’ ಪ್ರವೇಶಿಸದಂತೆ ನಿಷೇಧಿಸಿ ‘ರಾಜ್ಯ ಸರ್ಕಾರ’ ಆದೇಶ
ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಈ ಕೆಳಕಂಡಂತಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ