ನವದೆಹಲಿ: ನಿರ್ಮಾಪಕಿ ಏಕ್ತಾ ಕಪೂರ್ ಅವರ ವೆಬ್ ಸರಣಿ ‘ಎಕ್ಸ್ಎಕ್ಸ್ಎಕ್ಸ್’ ನಲ್ಲಿ (‘XXX’) “ಆಕ್ಷೇಪಾರ್ಹ ವಿಷಯ” ದ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವರು ಯುವ ಪೀಳಿಗೆಯ ಮನಸ್ಸನ್ನು ಕಲುಷಿತಗೊಳಿಸುತ್ತಿದ್ದಾರೀ ಎಂದು ಹೇಳಿದೆ.

ತನ್ನ ಒಟಿಟಿ ಪ್ಲಾಟ್ಫಾರ್ಮ್ ಎಎಲ್ಟಿ ಬಾಲಾಜಿಯಲ್ಲಿ ಪ್ರಸಾರವಾದ ಎಕ್ಸ್ಎಕ್ಸ್ಎಕ್ಸ್ನಲ್ಲಿ ಸೈನಿಕರನ್ನು ಅವಮಾನಿಸಿದ ಮತ್ತು ಅವರ ಕುಟುಂಬಗಳ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ತನ್ನ ವಿರುದ್ಧ ಹೊರಡಿಸಲಾದ ಬಂಧನ ವಾರಂಟ್ಗಳನ್ನು ಪ್ರಶ್ನಿಸಿ ಕಪೂರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿರುವಾಗ ಈ ಅಭಿಪ್ರಾಯ ಬಂದಿದೆ.

“. ನೀವು ಈ ದೇಶದ ಯುವ ಪೀಳಿಗೆಯ ಮನಸ್ಸನ್ನು ಕಲುಷಿತಗೊಳಿಸುತ್ತಿದ್ದೀರಿ. ಒಟಿಟಿ ಕಂಟೆಂಟ್ ಎಲ್ಲರಿಗೂ ಲಭ್ಯವಿದೆ. ನೀವು ಜನರಿಗೆ ಯಾವ ರೀತಿಯ ಆಯ್ಕೆಯನ್ನು ನೀಡುತ್ತಿದ್ದೀರಿ?…. ನೀವು ಯುವಕರ ಮನಸ್ಸನ್ನು ಕಲುಷಿತಗೊಳಿಸುತ್ತಿದ್ದೀರಿ” ಎಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಸಿ.ಟಿ.ರವಿಕುಮಾರ್ ಅವರನ್ನು ಒಳಗೊಂಡ ನ್ಯಾಯಪೀಠ ಶುಕ್ರವಾರ ಹೇಳಿದೆ.

 

Share.
Exit mobile version