ಕೋಲಾರ : ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳ ಮೇಲೆ ಏಕಾಏಕಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಪ್ರಕರಣಗಳು ಕಂಡುಬರುತ್ತಿವೆ. ಇದೀಗ ಕೋಲಾರದಲ್ಲಿ ವೃದ್ದೆಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ.
ಹೌದು ಬೀದಿ ನಾಯಿಗಳ ದಾಳಿಯಿಂದ ವೃದ್ಧೆ ಲಕ್ಷಮ್ಮಗೆ ಗಂಭೀರವಾಗಿ ಗಾಯಗಳಾಗಿವೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಮಹಾಲಕ್ಷ್ಮಿ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಕೂಡಲೇ ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ವೃದ್ದೆಯನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀನಿವಾಸಪುರ ಪುರಸಭೆ ನಿರ್ಲಕ್ಷಕ್ಕೆ ಇದೀಗ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.