ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ – 2023ಕ್ಕೆ ( Karnataka Assembly Election 2023 ) ರಾಜ್ಯ ಚುನಾವಣಾ ಆಯೋಗ ( Election Commission ) ಭರ್ಜರಿ ತಯಾರಿ ನಡೆಸಿದೆ. ಈ ಸಂಬಂಧ ಇಂದು 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
BJP ರಿಪೋರ್ಟ್ ಕಾರ್ಡ್ ಮುಂದಿಟ್ಟು ಬಹುಮತ ಸಾಧಿಸಲಿದ್ದೇವೆ – ಜೆ.ಪಿ.ನಡ್ಡಾ
ಈ ಕುರಿತಂತೆ ಟ್ವಿಟ್ ಮಾಡಿ ತಿಳಿಸಿರುವಂತ ರಾಜ್ಯ ಚುನಾವಣಾ ಆಯೋಗವು, ಕರ್ನಾಟಕ ವಿಧಾನಸಭಾ ಚುನಾವಣೆ – 2023 ರ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವದನ್ನು http://nvsp.in ಜಾಲತಾಣಕ್ಕೆ ಭೇಟಿ ನೀಡಿ, ಖಚಿತಪಡಿಸಿಕೊಳ್ಳಲು ತಿಳಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ – 2023 ರ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.
ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವದನ್ನು ಖಚಿತಪಡಿಸಿಕೊಳ್ಳಲು ಈ ಕೆಳಗಿನ ವೆಬ್ ಸೈಟ್ ಅಥವಾ ಆ್ಯಪ್ ಗಳ ಮೂಲಕ ನೋಡಬಹುದಾಗಿದೆ.
https://t.co/8D3SirxgTB or Voter Portal or Voter Helpline— Chief Electoral Officer, Karnataka (@ceo_karnataka) January 5, 2023
ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದಂತ ಪಟ್ಟಿಯ ಅನುಸಾರ, ಪ್ರಸ್ತುತ ರಾಜ್ಯದಲ್ಲಿ ಒಟ್ಟು 5,05,48,553 ಮತದಾರರಿದ್ದಾರೆ. ಪುರುಷರು – 2,54,49,725 ಮಹಿಳೆಯರು – 2,50,94,326, ಇತರರು – 4,502 ಇದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಒಟ್ಟು 5,05,48,553 ಮತದಾರರಿದ್ದಾರೆ.
ಪುರುಷರು – 2,54,49,725
ಮಹಿಳೆಯರು – 2,50,94,326
ಇತರರು – 4,502— Chief Electoral Officer, Karnataka (@ceo_karnataka) January 5, 2023
ರಾಜ್ಯದ ಪ್ರಸ್ತುತ ಅಂತಿಮ ಮತದಾರರ ಪಟ್ಟಿ ಬಿಡುಗಡೆ 7 ಲಕ್ಷ ಯುವ ಮತದಾರರು ಹೊಸದಾಗಿ ಸೇರ್ಪಡೆ ರಾಜ್ಯದ ಮತದಾರರ ಲಿಂಗಾನುಪಾತದಲ್ಲಿ ಮಹಿಳಾ ಪ್ರಾತಿನಿಧ್ಯ ಏರಿಕೆ, 1000 ಪುರಷರಿಗೆ/988 ಮಹಿಳೆಯರು. ಕಳೆದ ಬಾರಿ 983 ಅನುಪಾತವಿತ್ತು ಈ ಬಾರಿ 5 ಪಾಯಿಂಟ್ ಮಹಿಳಾ ಮತದಾರರ ಅನುಪಾತದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದೆ.
ರಾಜ್ಯದ ಪ್ರಸ್ತುತ ಅಂತಿಮ ಮತದಾರರ ಪಟ್ಟಿ ಬಿಡುಗಡೆ
7 ಲಕ್ಷ ಯುವ ಮತದಾರರು ಹೊಸದಾಗಿ ಸೇರ್ಪಡೆ
ರಾಜ್ಯದ ಮತದಾರರ ಲಿಂಗಾನುಪಾತದಲ್ಲಿ ಮಹಿಳಾ ಪ್ರಾತಿನಿಧ್ಯ ಏರಿಕೆ, 1000 ಪುರಷರಿಗೆ/988 ಮಹಿಳೆಯರು. ಕಳೆದ ಬಾರಿ 983 ಅನುಪಾತವಿತ್ತು
ಈ ಬಾರಿ 5 ಪಾಯಿಂಟ್ ಮಹಿಳಾ ಮತದಾರರ ಅನುಪಾತದಲ್ಲಿ ಏರಿಕೆ
— Chief Electoral Officer, Karnataka (@ceo_karnataka) January 5, 2023
ಪ್ರಸ್ತುತ ಪ್ರಕಟವಾಗಿರುವ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು – 6,50,532 ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾರರು – 1,66,521 ಎಂದು ಮಾಹಿತಿ ಹಂಚಿಕೊಂಡಿದೆ.
ಪ್ರಸ್ತುತ ಪ್ರಕಟವಾಗಿರುವ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು – 6,50,532
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾರರು – 1,66,521
— Chief Electoral Officer, Karnataka (@ceo_karnataka) January 5, 2023