ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರ-23 ಅನ್ನು ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರವನ್ನಾಗಿ ಪರಿಗಣಿಸಿ, ಅರೆಸೇನಾ ಪಡೆಯನ್ನು ನಿಯೋಜಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ.
ಇಂದು ಈ ಕುರಿತು ರಾಮನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗದಿಂದ ಪತ್ರವನ್ನು ಬರೆಯಲಾಗಿದೆ. ಅದರಲ್ಲಿ ಭಾರತ ಚುನಾವಣಾ ಆಯೋಗವು ಶ್ರೀ ಪದ್ಮನಾಭ ಜಿ.ವಿ., ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯ ಚುನಾವಣಾ ಏಜೆಂಟ್ ಇವರು ತಮ್ಮ ಇ-ಮೇಲ್ ದಿನಾಂಕ: 16.04.2024ರಲ್ಲಿ ಭಾರತ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಬೆಂಗಳೂರು ಗ್ರಾಮಾಂತರ-23 ಲೋಕಸಭಾ ಕ್ಷೇತ್ರದಲ್ಲಿ ಪುಬಲ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಆಡಳಿತ ಯಂತ್ರವನ್ನು ದುರುಪಯೋಗ ಪಡೆಸಿಕೊಳ್ಳುವ ಸಾಧ್ಯತೆಗಳಿದ್ದು, ಈ ಕಾರಣಳಿಂದ ಸದರಿ ಕ್ಷೇತ್ರಕ್ಕೆ ಹೆಚ್ಚುವರಿ ಪೊಲೀಸ್ ಪಡೆಯನ್ನು ಹಾಗೂ ಅರೆ ಸೇನಾಪಡೆಯನ್ನು ನಿಯೋಜಿಸಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ನೆರವಾಗುವಂತೆ ಕೋರಿರುತ್ತಾರೆ. ಸದರಿ ಮನವಿ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಭಾರತ ಚುನಾವಣಾ ಆಯೋಗವು ಈ ಕಛೇರಿಗೆ ಸದರಿ ದೂರು ಅರ್ಜಿಯನ್ನು ವರ್ಗಾಯಿಸಲಾಗಿರುತ್ತದೆ ಎಂದಿದೆ.
ಈ ಕುರಿತು ಪರಿಶೀಲಿಸಲಾಗಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷವು ಪತ್ರ ದಿನಾಂಕ: 10.04.2024ರಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರವನ್ನಾಗಿ ಪರಿಗಣಿಸಿ, ಕ್ಷೇತ್ರದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸುವಂತೆ ಕೋರಲಾಗಿತ್ತು. ಅದರಂತೆ ಉಲ್ಲೇಖ(2)ರಲ್ಲಿ ಈ ಕುರಿತು ನಿಯಮಾನಸಾರ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ತಮಗೆ ತಿಳಿಸಲಾಗಿತ್ತು. ಮುಂದುವರೆದು, ಭಾರತ ಚುನಾವಣಾ ಆಯೋಗದ ಉಲ್ಲೇಖ(1)ರ ಪತ್ರವನ್ನು ಇದರೊಂದಿಗೆ ಲಗತ್ತಿಸಿ ಈ ಕುರಿತು ನಿಯಮಾನಸಾರ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದಾರೆ.
BREAKING: ಮತ ಚಲಾಯಿಸಿದ ‘ನಟ ತಲಪತಿ ವಿಜಯ್’ ವಿರುದ್ಧ ಪೊಲೀಸ್ ದೂರು ದಾಖಲು
ಕರ್ನಾಟಕಕ್ಕೆ ಪ್ರಧಾನಿ ಮೋದಿ ಚೊಂಬು ಕೊಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!