ಬೆಂಗಳೂರು : ಮೈಸೂರಿನಲ್‌ಇ ನಡೆದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು, ಐಪಿಸಿ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಚುನಾವಣಾ ಆಯೋಗವನ್ನು ಕಾಂಗ್ರೆಸ್ ಒತ್ತಾಯಿಸಿದೆ.
ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ತುಕ್ಡೆ ಗ್ಯಾಂಗ್ ಎಂದು ಮೋದಿ ಹೇಳಿದ್ದಾರೆ. ಧಾರ್ಮಿಕ ಭಾವನೆ ಕೆರಳಿಸುವ ರೀತಿ ಮಾತನಾಡಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.