ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯಗೆ ನೀತಿ ಸಂಹಿತೆ ಬಿಸಿ ತಟ್ಟಿದೆ. ಚುನಾವಣಾಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಬಸ್ ಅನ್ನು ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರದ ಐಬಿ ಬಳಿ ಸಿಎಂ ಸಿದ್ದರಾಮಯ್ಯ ಬಸ್ ಪರಿಶೀಲನೆ ನಡೆಸಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಇಂದು ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದು, ಈ ವೇಳೆ ಚುನಾವಣಾಧಿಕಾರಿಗಳು ಬಸ್ ಪರಿಶೀಲನೆ ನಡೆಸಲಾಗಿದೆ.