ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳ ಮೊದಲು ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.
ಈ ಕುರಿತಂತೆ ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರಾವಧಿ) ಕಾಯ್ದೆ, 2023 ರ ಸೆಕ್ಷನ್ 11 ರ ಷರತ್ತು (1) ಕ್ಕೆ ಅನುಸಾರವಾಗಿ, ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರು ಸಲ್ಲಿಸಿದ ರಾಜೀನಾಮೆಯನ್ನು 2024 ರ ಮಾರ್ಚ್ 09 ರಿಂದ ಜಾರಿಗೆ ಬರುವಂತೆ ರಾಷ್ಟ್ರಪತಿಯವರು ಅಂಗೀಕರಿಸಿದ್ದಾರೆ ಎಂದು ತಿಳಿಸಲಾಗಿದೆ.
ಗೋಯೆಲ್ ಅವರು ನವೆಂಬರ್ 21, 2022 ರಂದು ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. 1985ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಅರುಣ್ ಗೋಯಲ್ ಈ ಹಿಂದೆ ಭಾರತ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇಂತಹ ಅರುಣ್ ಗೋಯೆಲ್ ಅವರು ಇದೀಗ ಚುನಾವಣಾ ಆಯುಕ್ತರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.
‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಪೂರ್ಣ ಪ್ರಮಾಣದ ನಿವೃತ್ತಿ ವೇತನದ ಮಿತಿ ’30 ವರ್ಷ’ಕ್ಕೆ ಇಳಿಕೆ
‘ಪಾಕಿಸ್ತಾನ’ ಬೆಂಬಲಿಸುವವರನ್ನು ‘ಗುಂಡಿಕ್ಕಿ’ ಕೊಲ್ಲಬೇಕು: ‘ಸಚಿವ ಕೆ.ಎನ್ ರಾಜಣ್ಣ’ ವಿವಾದಾತ್ಮಕ ಹೇಳಿಕೆ